ರಾಮನಗರ: ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಸುದೇವಪುರ ಗ್ರಾಮದಲ್ಲಿ ಯುವಕನೊಬ್ಬ ತಮ್ಮ ಮನೆಯಲ್ಲಿರುವ ದೇವರ ಕೋಣೆಯಲ್ಲಿ ಕುಳಿತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ ಶಿವರಾಜ್ (35) ಎಂದು ತಿಳಿದು ಬಂದಿದೆ. ಈತ ತನ್ನ ಮನೆಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ದಿನಗಳ ಬಳಿಕ ಆತ ಮಾಡಿದ್ದ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ
ಶಿವರಾಜ್ ತನ್ನ ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದನು. ಒಟ್ಟು 40 ಸಾವಿರ ಹಣ ಸಾಲ ಪಡೆದಿದ್ದು, ಸಾಲದ ಹಣ ಮರಳಿ ಕೊಡದ ಕಾರಣ ಶಿವರಾಜ್ ಗೆ ಕಿರುಕುಳ ನೀಡಿದ್ದಾರೆ. ನನ್ನ ಸ್ನೇಹಿತರು ಇಸ್ಪೀಟ್ ಸೇರಿ ಹಲವು ದುಶ್ಚಟಗಳನ್ನು ಕಲಿಸಿ ಸುಮಾರು 8 ಲಕ್ಷ ರೂ. ನಷ್ಟಕ್ಕೆ ಕಾರಣವಾಗಿದ್ದಾರೆ. ಆದರೆ, ನನ್ನ ಮನೆಯವರು ನನ್ನ ಸಾವಿಗೆ ಕಾರಣವಲ್ಲ. ಸ್ನೇಹಿತರ ನಿರಂತರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


