ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್ ಗೆ ಸೇರಿದ ಹಾಸ್ಟೆಲೊಂದರಲ್ಲಿ ಸೋಮವಾರ ರಾತ್ರಿ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ ನೂರಾರು ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ನಡೆದಿದೆ.
ನಗರದ ಹೊರವಲಯದ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳು ರಾತ್ರಿಯ ಊಟ ಮಾಡಿದ್ದು, ಸ್ವಲ್ಪ ಹೊತ್ತಿನಲ್ಲೇ ಅಸ್ವಸ್ಥಗೊಂಡರು ಎನ್ನಲಾಗಿದೆ. ಸುಮಾರು 137 ವಿದ್ಯಾರ್ಥಿಗಳು ವಿಷಾಹಾರದಿಂದಾಗಿ ಆಸ್ಪತ್ರೆಗೆ ಸೇರಿದ್ದಾರೆ.
ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರು ನಗರದ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


