nammatumakuru

    Subscribe to Updates

    Get the latest creative news from FooBar about art, design and business.

    What's Hot

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026
    Facebook Twitter Instagram
    ಟ್ರೆಂಡಿಂಗ್
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.11ರಂದು ಕೊರಟಗೆರೆ ಜೆಎಂಎಫ್‍ ಸಿ ನ್ಯಾಯಲಯದಲ್ಲಿ ಲೋಕ ಆದಾಲತ್
    ಕೊರಟಗೆರೆ February 7, 2023

    ಫೆ.11ರಂದು ಕೊರಟಗೆರೆ ಜೆಎಂಎಫ್‍ ಸಿ ನ್ಯಾಯಲಯದಲ್ಲಿ ಲೋಕ ಆದಾಲತ್

    By adminFebruary 7, 2023No Comments2 Mins Read
    koratagere

    ಕೊರಟಗೆರೆ: ನ್ಯಾಯದಿಂದ ವಂಚಿತರಾದ, ಆರ್ಥಿಕವಾಗಿ ಹಿಂದುಳಿದವರಿಗೆ ಲೋಕ ಆದಾಲತ್ ಮೂಲಕ ನ್ಯಾಯ ಒದಗಿಸಿಕೊಡುವ ವ್ಯವಸ್ಥೆ ಇದೆ ಎಂದು ಜೆಎಂಎಫ್‍ಸಿ ಸಿವಿಲ್ ನ್ಯಾಯಧೀಶರಾದ ಜೆ.ಎನ್.ಶ್ರೀನಾಥ್ ತಿಳಿಸಿದರು.

    ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಶ್ರಾಯದಲ್ಲಿ ಕೊರಟಗೆರೆ ಕಾನೂನು ಸೇವಾ ಸಮಿತಿ ವತಿಯಿಂದ ಕೊರಟಗೆರೆ ಜೆಎಂಎಫ್‍ಸಿ ನ್ಯಾಯಲಯದಲ್ಲಿ ಲೋಕಾ ಆದಾಲತ್ (ಜನತಾ ನ್ಯಾಯಲಯ) ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರ್ಥಿಕವಾಗಿ ಬಲಿಷ್ಠರಾಗಿರುವವರು ದುರ್ಬಲರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ, ಕಾನೂನಿನ ಅರಿವು ಇಲ್ಲದೇ ಸಾರ್ವಜನಿಕರು ಅನೇಕ ಬಾರಿ ಮೋಸ ಹೋಗುತ್ತಾರೆ, ಇಂತಹ ಸಂದರ್ಭದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ಕಾನೂನು ಸೇವೆಗಳ ಪ್ರಾಧಿಕಾರ ನ್ಯಾಯ ಒದಗಿಸಿ ಕೊಡುವಲ್ಲಿ ನೆರವಾಗುತ್ತದೆ ಎಂದು ಹೇಳಿದರು.

    ರಾಜ್ಯದ ಎಲ್ಲಾ ನ್ಯಾಯಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಆದಾಲತ್‍ಗಳನ್ನು ಏರ್ಪಡಿಸಲಾಗಿದ್ದು ಇದರಲ್ಲಿ ಚೆಕ್‍ಬೌನ್ಸ್, ಕೌಟುಂಬಿಕ ಆಸ್ತಿ ವಿವಾದಗಳು ಮತ್ತು ಜಗಳಗಳು, ಮೋಟಾರ್ ವಾಹನಗಳು, ಅಪಘಾತದ ವಿಮಾ ಪ್ರಕರಣಗಳು, ಸೇರಿದಂತೆ ಜನತಾ ನ್ಯಾಯಲಯಕ್ಕೆ ಒಳಪಡುವ ಹಲವು ಅರ್ಜಿಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದರು.

    lok adalath

    ಲೋಕ ಆದಾಲತ್‍ನಲ್ಲಿ ಪ್ರಕರಣಗಳ ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದ್ದು, ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳಲು ಸಂಬಂಧಪಟ್ಟ ನ್ಯಾಯಲಯದಲ್ಲಿರುವ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಎಂದರು.

    ವಕೀಲರ ಸಂಘದ ಅಧ್ಯಕ್ಷ ಬಿಎಲ್ ನಾಗರಾಜು ಮಾತನಾಡಿ, ಕೌಟುಂಬಿಕ ಕಲಹ ಹಾಗೂ ಇತರೆ ಯಾವುದೇ ಸಮಸ್ಯೆಗೆ ಸಂಬಂಧಿಸಿದಂತೆ ನ್ಯಾಯಲಯಕ್ಕೆ ವರ್ಷಗಟ್ಟಲೆ ಅಲೆದಾಡಿದ ನಂತರವೂ ನ್ಯಾಯಸಿಗದೆ ಸಾರ್ವಜನಿಕರು ಪರದಾಡುತ್ತಿರುವ ಕಾರಣ ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕು ಎನ್ನುವ ದೃಷ್ಟಿಯಿಂದ ಕಾನೂನು ಸೇವೆಗಳ ಪ್ರಾಧಿಕಾರವು ಇಂತಹ ವ್ಯವಸ್ಥೆಯನ್ನು ರೂಪಿಸಿದೆ ಎಂದು ತಿಳಿಸಿದರು.

    ಕಾನೂನಿನ ಅರಿವಿಲ್ಲದಿದ್ದಾಗ ದುರ್ಬಲರು ಸುಲಭವಾಗಿ ಅನ್ಯಾಯಕ್ಕೆ ಒಳಗಾಗುತ್ತಾರೆ, ಆದ್ದರಿಂದ ನ್ಯಾಯ ಪಡೆದುಕೊಳ್ಳಬೇಕಾದರೆ ಕಾನೂನಿನ ಬಗ್ಗೆ ಸಾರ್ವಜನಿಕರು ತಿಳಿದುಕೊಂಡಿರಬೇಕು, ಆಗ ಮಾತ್ರ ನ್ಯಾಯಲಯದಲ್ಲಿ ನಿಮ್ಮ ಸಮಸ್ಯೆಗೆ ನ್ಯಾಯ ಸಿಗಲು ಸಾಧ್ಯ, ಜನತಾ ಆದಾಲತ್‍ನಲ್ಲಿ ನ್ಯಾಯಧೀಶರು ಮತ್ತು ಸಂದಾನಕಾರರು ಎರಡು ಕಡೆಯ ಪ್ರತಿವಾದಿಗಳನ್ನು ಕರೆಸಿ ವ್ಯಾಜ್ಯದ ಕುರಿತು ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತಾರೆ ಎಂದು ಹೇಳಿದರು.

    ರಾಜ್ಯದ ಎಲ್ಲಾ ನ್ಯಾಯಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಆದಾಲತ್‍ಗಳನ್ನು ಏರ್ಪಡಿಸಲಾಗಿದೆ. ಇದರಲ್ಲಿ ಚೆಕ್‍ಬೌನ್ಸ್, ಕೌಟುಂಬಿಕ ಆಸ್ತಿ ವಿವಾದಗಳು ಮತ್ತು ಜಗಳಗಳು, ಮೋಟಾರ್ ವಾಹನಗಳು, ಅಪಘಾತದ ವಿಮಾ ಪ್ರಕರಣಗಳು, ಸೇರಿದಂತೆ ಜನತಾ ನ್ಯಾಯಲಯಕ್ಕೆ ಒಳಪಡುವ ಹಲವು ಅರ್ಜಿಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ.

     –ಜೆ.ಎನ್ ಶ್ರೀನಾಥ್

    ಜೆಎಂಎಫ್‍ಸಿ ಸಿವಿಲ್ ನ್ಯಾಯಧೀಶರು. ಕೊರಟಗೆರೆ.

     

    ಫೆ.11 ರಂದು ಕೊರಟಗೆರೆ ಸಿವಿಲ್  ಹಾಗೂ ಜೆಎಂಎಫ್‍ಸಿ ನ್ಯಾಯಲಯದಲ್ಲಿ ಲೋಕಾ ಆದಾಲತ್ 3 ತಿಂಗಳಿಗೊಮ್ಮೆ ವರ್ಷಕ್ಕೆ 4ಬಾರಿ ನಡೆಯಲಿದೆ, 3600 ಕ್ಕೂ ಹೆಚ್ಚು ಪ್ರಕರಣಗಳ ಅರ್ಜಿಗಳಿದ್ದು 2277 ಪ್ರಕರಣಗಳು ಜನತಾ ನ್ಯಾಯಲಯಕ್ಕೆ ಅರ್ಹತೆ ಅರ್ಜಿಗಳಾಗಿವೆ,302 ಅರ್ಜಿಗಳನ್ನು ಇತ್ಯರ್ಥ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಇದರಿಂದ ಹಲವು ಅರ್ಜಿದಾರರಿಗೆ ಅನುಕೂಲವಾಗಲಿದೆ.

     -ಬಿ.ಎಲ್.ನಾಗರಾಜು

    ಅಧ್ಯಕ್ಷರು, ವಕೀಲರ ಸಂಘ.ಕೊರಟಗೆರೆ.

     

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

     

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ಸೆಪ್ಟೆಂಬರ್ ತಿಂಗಳ ಭವಿಷ್ಯ ನಿಧಿ (PF) ವಂತಿಗೆ ನಿಮ್ಮ ಖಾತೆಗೆ ಇನ್ನೂ ಜಮೆಯಾಗಿಲ್ಲವೇ? ಹಾಗಿದ್ದರೆ ಮೊದಲು ನಿಮ್ಮ ಕಂಪನಿಯಲ್ಲಿ ಪಿಎಫ್…

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.