ದಾವಣಗೆರೆ ಜಿಲ್ಲೆಯ ಹರಿಹರ (Harihar) ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಇಂಗ್ಲೀಷ್ ಶಿಕ್ಷಕ ವಿಜಯ್ ಕುಮಾರ್ (54) ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಿಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ತರಗತಿಯಲ್ಲಿ ಪಾಠ ಮಾಡುವಾಗ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾರೆ. ಶಿಕ್ಷಕ ವಿಜಯ್ ಕುಮಾರ್ ಮೂಲತಃ ದಾವಣಗೆರೆ ತಾಲ್ಲೂಕು ಮಹಾದೇವಿಪುರದ ನಿವಾಸಿಯಾಗಿದ್ದಾರೆ.
ಹೃದಯಾಘಾತವಾದ ತಕ್ಷಣ ಸಹ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಸಾವನ್ನಪ್ಪಿದ್ದಾರೆ. ಶಿಕ್ಷಕರ ಮೃತದೇಹದ ಬಳಿ ಮಕ್ಕಳು ಗೋಳಾಡುತ್ತಿರುವ ದೃಶ್ಯ ಮನಕಲುಕುವಂತಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


