ಬೆಂಗಳೂರು: ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕರ್ನಾಟಕ್ಕೆ ಬಂದ ಬೆನ್ನಲ್ಲೆ ಬಿಜೆಪಿ ಚುನಾವಣೆ ಗೆಲ್ಲುವ ಭರಾಟೆಯಲ್ಲಿದ್ದರೆ ಜೆಡಿಎಸ್ ಟ್ವಿಟ್ ಮೂಲಕ ಬಿಜೆಪಿ ಕಾಲೆಳೆಸಿದೆ.
ರಾಜ್ಯ ಸರಕಾರದ ಆಡಳಿತ ಕಾರ್ಯವೈಖರಿ ವಿರುದ್ಧ ಟ್ವಿಟ್ ದಾಳಿ ನಡೆಸಿ ರಾಜ್ಯ ಬಿಜೆಪಿ ಸರ್ಕಾರ ನಪುಂಸಕ ಸರ್ಕಾರ ಎಂದು ಜೆಡಿಎಸ್ ಟ್ವೀಟ್ ಮಾಡುವುದರ ಮೂಲಕ ಸರಕಾರ ಕಾಲೆಳೆದಿದೆ.
ರಾಜ್ಯಕ್ಕೆ ಪ್ರಧಾನಿ ಬಂದಾಗ ಸ್ವಾಗತಿಸಿ, ಚುನಾವಣೆ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ರಾಜ್ಯದಲ್ಲಿ ಬರಗಾಲ, ಪ್ರವಾಹದ ವೇಳೆ ಮಾಯವಾಗುವ ಪ್ರಧಾನಿಯವರು ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ. ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕ. ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು. ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ. ಆದಾಯ, ಕಾರ್ಪೊರೇಟ್ ತೆರಿಗೆ, ಜಿಎಸ್ಟಿಯಿಂದ ಕೇಂದ್ರದ ಖಜಾನೆ ತುಂಬಿಸಿಕೊಳ್ಳಲು ಮಾತ್ರ ಕರ್ನಾಟಕ ಬೇಕು. ನಮ್ಮಿಂದ ಸಂಗ್ರಹವಾದ ತೆರಿಗೆಯಲ್ಲಿ ಕನಿಷ್ಠ ಪಾಲು ಸಿಗುವುದೇ ಕನಸಾಗಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


