ಮಂಗಳೂರು ಜಿಲ್ಲೆಯ ಮುಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ಅತಿಥಿ ಉಪನ್ಯಾಸಕಿ ಅಮಿತಾ ಬಿವಿ (34) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತಿಳಿದು ಬಂದಿದೆ.
ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಗಂಡನ ಮನೆಗೆ ಬಂದು ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಅಮಿತಾ ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


