ಬೀದರ್: ನೂತನ ಅಂಗನವಾಡಿ ಕೇಂದ್ರದ ಕಟ್ಟಡದ ಮುಂದೆ ನಿರ್ಮಿಸಲಾಗಿರುವ ಸೇಫ್ಟಿ ಟ್ಯಾಂಕ್ ಗೆ ಬಿದ್ದು 3 ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದ್ದು, ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಔರಾದ ಪಟ್ಟಣದ ಅಂಬಿಕಾ ಕಾಲೋನಿಯಲ್ಲಿ ಅಂಗನವಾಡಿ ಕೇಂದ್ರದ ಸಮೀಪವಿರುವ ಸೇಫ್ಟಿ ಟ್ಯಾಂಗ್ ಗುಂಡಿ ಮುಚ್ಚದ ಕಾರಣ, ಮುಂಜಾನೆ ಅಂಗನವಾಡಿ ಕೇಂದ್ರಕ್ಕೆ ಮಗು ತೆರಳಿದ ವೇಳೆ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದೆ. ಟ್ಯಾಂಕ್ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದರಿಂದಾಗಿ ಮಗು ಸಾವನ್ನಪ್ಪಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆ ನಡೆಸಿದರು.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಹೋ ರಾತ್ರಿ ಧರಣಿ ನಡೆಸಿದರು. ಸಚಿವ ಪ್ರಭು ಚೌವ್ಹಾಣ್ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಇಕಳಗಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತನಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಔರಾದ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದುಕೊಂಡರು.
ವರದಿ: ಅರವಿಂದ ಮಲ್ಲಿಗೆ
VIDEO:
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


