nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ !
    ರಾಜ್ಯ ಸುದ್ದಿ February 10, 2023

    ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ !

    By adminFebruary 10, 2023No Comments5 Mins Read
    ksou

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 23 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು ಎಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು.

    ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತಗಂಗೋತ್ರಿಯಲ್ಲಿ ಕೇಂದ್ರ ಕಛೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ 23 ಪ್ರಾದೇಶಿಕ ಕೇಂದ್ರಗಳು ಮತ್ತು 140 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ಸೇವೆಯನ್ನು ಒದಗಿಸುತ್ತ ಬಂದಿದೆ ಎಂದು ಅವರು ತಿಳಿಸಿದರು.


    Provided by
    Provided by

    ಕ.ರಾ.ಮು.ವಿ.ಯಲ್ಲಿ ಪದವಿ/ಸ್ನಾತಕೋತ್ತರ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಎ.ಎಸ್. ಐ.ಎ.ಎಸ್. ಪೊಲೀಸ್ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಕರಾಮುವಿಯ ವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದಾರೆ ಎಂದರು.

    ಕ.ರಾ.ಮು.ವಿ.ಯು ಯು.ಜಿ.ಸಿ. ಮಾನ್ಯತೆ ಪಡೆದಿರುವ 64 ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡುತ್ತಿದ್ದು ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ, ಪ್ರವಾಸೋದ್ಯಮ, ಭೂವಿಜ್ಞಾನ ಮತ್ತು ಇನ್ನಿತರೆ ಹೊಸ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

    ಕ.ರಾ.ಮು.ವಿ.ಯಲ್ಲಿ ಪ್ರಸ್ತುತ ಒಂದು ಲಕ್ಷ ಪ್ರವೇಶಾತಿ ಸಾಧಿಸಬೇಕು ಎಂಬ ಗುರಿ ಹೊಂದಲಾಗಿದೆ.

    ಯು.ಜಿ.ಸಿ. ಮಾನ್ಯತೆ:

    ಕ.ರಾ.ಮು.ವಿ. ನೀಡುತ್ತಿರುವ ಶಿಕ್ಷಣಕ್ರಮಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯು.ಜಿ.ಸಿ.) ಸಾರ್ವಜನಿಕ ಪ್ರಕಟಣೆ ಸಂಖ್ಯೆ F.No. 14-5/2018 (DEB-1), ದಿನಾಂಕ 14.08.2018 ಮತ್ತು F.No. 1-6/2018 (DEB-1), ದಿನಾಂಕ 03.10.2018ರ ಪ್ರಕಾರ 2018-19 ರಿಂದ 2022-23 ರವರೆಗೆ ಯು.ಜಿ.ಸಿ. ಮಾನ್ಯತೆ ಇರುತ್ತದೆ.

    ಏಕಕಾಲದಲ್ಲೇ ಏರಡು ಪದವಿ (ದ್ವಿ-ಪದವಿ):

    ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ ಶಿಕ್ಷಣ) (Regular) ಒಂದು ಕೋರ್ಸ್ ಮತ್ತು ದೂರಶಿಕ್ಷಣದಲ್ಲಿ (Open University) ಇನ್ನೊಂದು ಕೋರ್ಸ್‍ಅನ್ನು ಏಕಕಾಲದಲ್ಲೇ ಮಾಡಲು ಅವಕಾಶವಿರುತ್ತದೆ.

    ದೂರ ಶಿಕ್ಷಣ ನೀಡುವ ಕರ್ನಾಟಕ ರಾಜ್ಯದ ಏಕ ಮಾತ್ರ ವಿಶ್ವವಿದ್ಯಾನಿಲಯ:

    ಕರ್ನಾಟಕ ರಾಜ್ಯದಲ್ಲಿ ಕ.ರಾ.ಮು.ವಿ. ಹೊರತುಪಡಿಸಿ ಬೇರಾವುದೇ ಸಾಂಪ್ರದಾಯಿಕ ವಿ.ವಿ.ಗಳು ದೂರ ಮತ್ತು ಮುಕ್ತ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲವೆಂದು ಕರ್ನಾಟಕ ಘನ ಸರ್ಕಾರವು ದಿನಾಂಕ 30.12.2020ರ ಕರ್ನಾಟಕ ರಾಜ್ಯ ಪತ್ರದಲ್ಲಿನ ಅಧಿಸೂಚನೆ ಸಂಖ್ಯೆ:ಸಂವ್ಯಶಾಇ43 ಶಾಸನದಲ್ಲಿ ಅಧಿಕೃತವಾಗಿ ಆದೇಶಿಸಿದ್ದು, ಈ ಆದೇಶದನ್ವಯ ಪ್ರಸ್ತುತ ರಾಜ್ಯದಲ್ಲಿ ಕರಾಮುವಿಯು ದೂರಶಿಕ್ಷಣ ನೀಡುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯವಾಗಿರುತ್ತದೆ.

    ಸಾಂಪ್ರದಾಯಿಕ ವಿ.ವಿ.ಗಳು ನೀಡುವ ಪದವಿ ಮತ್ತು ಕರಾಮುವಿ ನೀಡುವ ಪದವಿಗಳು ಸಮಾನ ಅರ್ಹತೆ:

    ಯು.ಜಿ.ಸಿ. ನೀಡಿರುವ ಸಾರ್ವಜನಿಕ ಪ್ರಕಟಣೆ ಸಂಖ್ಯೆ F.No. 1-9 (DEB-1), ದಿನಾಂಕ 23.02.2018ರ ಅನ್ವಯ ಮುಕ್ತ ವಿಶ್ವವಿದ್ಯಾನಿಲಯಗಳ ದೂರಶಿಕ್ಷಣದ ಪದವಿ ಸಾಂಪ್ರದಾಯಿಕ ವಿ.ವಿ.ಗಳು ನೀಡುವ ಶಿಕ್ಷಣ ಕ್ರಮಗಳಿಗೆ ಸಮಾನವಾಗಿರುತ್ತದೆ.

    ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ:

    ಇತರ ಕಾಲೇಜಿನಲ್ಲಿ ಅಥವಾ Regular ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಅಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು.

    ತುಮಕೂರಿನಲ್ಲಿ ಸುಸಜ್ಜಿತ ಕರಾಮುವಿ ಪ್ರಾದೇಶಿಕ ಕೇಂದ್ರ:

    ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತುಮಕೂರಿನ ನಗರದಲ್ಲಿ 2010ರಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಧಾಪಿಸುವುದರ ಮೂಲಕ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಸದರಿ ಕೇಂದ್ರವು 2018ರಲ್ಲಿ ತುಮಕೂರಿನ ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಈ ಕಟ್ಟಡ ಮೂರು ಅಂತಸ್ತು ಇದ್ದು, 13 ಉಪನ್ಯಾಸ ಕೊಠಡಿಗಳನ್ನು, ಹೊಸದಾಗಿ ಗ್ರಂಥಾಲಯ ವಿಭಾಗವನ್ನು ಹಾಗೂ ಇತರೆ ಸೌಲಭ್ಯಗಳನ್ನು ಒಳಕೊಂಡಿದ್ದು ಮತ್ತು ಈ ಕಛೇರಿಯಲ್ಲಿ ನುರಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಗೆ ಕರಾಮುವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತಿದೆ.

    ಪರೀಕ್ಷಾ ಕೇಂದ್ರ ಮತ್ತು ವಾರಾಂತ್ಯ ಸಂಪರ್ಕ ತರಗತಿಗಳು:

    ಕರಾಮುವಿಯ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಕರಾಮುವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ ಪ್ರಯೋಗಿಕ ತರಗತಿಗಳನ್ನು ತುಮಕೂರಿನಲ್ಲೆ ನಡೆಸಲು ಕ್ರಮವಹಿಸಲಾಗುತ್ತಿದೆ.

    2022-23ರ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭವಾಗಿದೆ:

    ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಕಟಣೆಯು ದಿನಾಂಕ 17.01.2023 ರಿಂದ ಪ್ರಾರಂಭವಾಗಿದ್ದು, ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿವೆ, ಮಾರ್ಚ್ 31, 2023 ಕೊನೆಯ ದಿನಾಂಕವಾಗಿರುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ ಳಿಗೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವುದೇನೆಂದರೆ ಕರಾಮುವಿಯ ಅಧಿಕೃತ ವೆಬ್‍ ಸೈಟ್ www.ksoumysuru.ac.in ನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಆನ್‍ ಲೈ ನ್‍ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಅನ್‍ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು.

    ಪ್ರತಿ ತಾಲ್ಲೂಕಿಗೆ ಒಂದು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರ:

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಈಗಾಗಲೇ ನಾಲ್ಕು ಕಲಿಕಾರ್ಥಿ ಸಹಾಯ ಕೇಂದ್ರಗಳಿದ್ದು, (ತುಮಕೂರು ನಗರದಲ್ಲಿ Vidya First Grade College.; Sacred Heart First Grade College; Vidyavahini First Grade College ಮತ್ತು ಮಧುಗಿರಿಯಲ್ಲಿ Government First Grade College) ಮಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಆದ್ಯಯನ ಕೇಂದ್ರಗಳನ್ನು) ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ತೀರ್ಮಾನಿಸಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಅನ್‍ಲೈನ್ ಮುಖಾಂತರ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.

    ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ ಒದಗಿಸಿರುವ ರಿಯಾಯಿತಿಗಳು

    ಬೋಧನಾ ಶುಲ್ಕ ರಿಯಾಯಿತಿ:

    * ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು

    * ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು

    * ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 30%ರಷ್ಟು ರಿಯಾಯಿತಿ ಇರುತ್ತದೆ.

    * KSRTC/BMTC/NWKSRTC/KKRTC  ನೌಕರರುಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 25%ರಷ್ಟು ರಿಯಾಯಿತಿ ಇರುತ್ತದೆ.

    ಪೂರ್ಣ ಶುಲ್ಕ ವಿನಾಯಿತಿ:

    * ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ,

    * ದೃಷ್ಠಿಹೀನ ವಿದ್ಯಾರ್ಥಿಗಳಿಗೆ (B.Ed/MBA ಹೊರತುಪಡಿಸಿ)

    * ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಆ ತಂದೆ / ತಾಯಿಯ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣಕ್ರಮಗಳಿಗೆ ಉಚಿತ ಪ್ರವೇಶಾತಿ ನೀಡಲಾಗುವುದು.

    ವಿಶೇಷ ಸೂಚನೆ:

    ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC ವಿದ್ಯಾರ್ಥಿಗಳಿಗೂ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ ಅಥವಾ ಪೂರ್ಣ ಶುಲ್ಕ ಮರುಭರಿಕೆಯಾಗುತ್ತದೆ.

    ಕ.ರಾ.ಮು.ವಿ.ಯ ವೈಶಿಷ್ಟ್ಯತೆಗಳು/ಸೌಲಭ್ಯಗಳು

    * ಪ್ರತಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ, ಪ್ರತಿ ತಾಲ್ಲೂಕಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ.

    * ಎಲ್ಲಾ ಶೈಕ್ಷಣಿಕ ಕ್ರಮಗಳ ಕಲಿಕಾ ಅಧ್ಯಯನ ಸಾಮಗ್ರಿ ಡಿಜಿಟಲೀಕರಣ, ಪ್ರತ್ಯೇಕ KSOU Student Appನ ಬಳಕೆ ಆನ್‍ಲೈನ್‍ನಲ್ಲಿ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಅಭ್ಯಸಿಸಲು ಅವಕಾಶ.

    *  ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗ ರಚನೆ, ರಾಜ್ಯದ ಎಲ್ಲೆಡೆ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರಗಳ ಆಯೋಜನೆ.

    * `ದೃಶ್ಯವಾಹಿನಿ’ ಯೂಟ್ಯೂಬ್ ಚಾನೆಲ್ ಸ್ಥಾಪನೆ, ಅಧ್ಯಾಪಕರ ಬೋಧನಾ ವಿಡಿಯೋ ವಿದ್ಯಾರ್ಥಿಗಳಿಗೆ ಲಭ್ಯ.

    * ಕ.ರಾ.ಮು.ವಿ. `ಪ್ರಸಾರಾಂಗ’, ರೇಡಿಯೋ ಸ್ಥಾಪನೆ.

    * ಕ.ರಾ.ಮು.ವಿ. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮೂಲಕ ಅತ್ಯಂತ ಕನಿಷ್ಠ ಶುಲ್ಕದಲ್ಲಿ ತರಬೇತಿ ನೀಡಲಾಗುತ್ತಿದೆ.

    * ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಮಾಡಲಾಗಿದೆ.

    * ನ್ಯಾಕ್ A++ ಮಾನ್ಯತೆಗಾಗಿ ಸುಸಜ್ಜಿತ ಕಟ್ಟಡ, ಮೂಲ ಸೌಕರ್ಯಗಳು, ಬೋಧಕ ವರ್ಗ, ಪ್ರಾದೇಶಿಕ ಕೇಂದ್ರಗಳು, ಕಲಿಕಾರ್ಥಿ ಸಹಾಯ ಕೇಂದ್ರಗಳ ಮಾಹಿತಿಯನ್ನು ಸಲ್ಲಿಸಲಾಗಿದೆ. ಅತಿ ಶೀಘ್ರದಲ್ಲಿ ನ್ಯಾಕ್ ಮಾನ್ಯತೆ ಸಿಗುವ ನಿರೀಕ್ಷೆಯಲ್ಲಿದ್ದೇವೆ.

    ಪತ್ರಿಕಾಗೋಷ್ಠಿಯಲ್ಲಿ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರಿನ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ…

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.