ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಆರೀಫ್ ಎಂಬುವವನ್ನ ಬಂಧಿಸಿದ್ದಾರೆ.
ಶಂಕಿತ ಉಗ್ರ ಆರೀಫ್ ಅಲ್ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಈತ ಕಳೆದ 2 ವರ್ಷಗಳಿಂದ ಅಲ್ಖೈದಾ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ವರ್ಕ್ ಫರ್ಮ್ ಹೋಮ್ ಮೂಲಕ ಮನೆಯಲ್ಲೆ ಕೆಲಸ ಮಾಡ್ತಿದ್ದ ಆರೀಫ್ಗೆ ಉಗ್ರ ಸಂಘಟನೆಗಳಲ್ಲಿ ಸೇರಿಕೊಳ್ಳಬೇಕು ಎಂಬ ಕನಸಿತ್ತು. ಅದರಂತೆ ಸಾಮಾಜಿಕ ಜಾಲತಾಣಗಳು, ವೆಬ್ ಸೈಟ್ ಮೂಲಕ ಉಗ್ರ ಸಂಘಟನೆಗಳನ್ನು ಸೇರಲು ತಯಾರಿ ನಡೆಸಿದ್ದ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


