ಕಲಬುರ್ಗಿ: ಜೆಡಿಎಸ್ ಪಕ್ಷಕ್ಕೆ ಮತ ಹಾಕಿದರೆ ಬಿಜೆಪಿಗೆ ಮತಹಾಕಿದಂತೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರು ಜೆಡಿಎಸ್ ಗೆ ಮತ ಹಾಕಬೇಡಿ ಎಂದು ಶಾಸಕ ಜಮೀರ್ ಅಹ್ಮದ್ ಕರೆ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಜೆಡಿಎಸ್ ಮತ್ತು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅನೇಕ ಭಾಗ್ಯಗಳನ್ನು ತಂದಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.
ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ, ಕೊಟ್ಟ ಭರವಸೆ ಈಡೇರಿಸದಿದ್ರೆ ಜನರಿಗೆ ದ್ರೋಹ ಮಾಡಿದಂತಾಗುತ್ತದೆ. ನಾವು ಜನರಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳಬೇಕು. ಬಿಜೆಪಿ ಹೇಳಿದಂತೆ ಇಲ್ಲಿವರಗೆ ನಡೆದುಕೊಂಡಿಲ್ಲಾ. ಸರ್ಕಾರ, ರಾಜ್ಯಪಾಲರಿಂದ ಬರಿ ಸುಳ್ಳು ಹೇಳಿಸಿದೆ. ಹಿಂದುತ್ವದ ಹೆಸರಲ್ಲಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸಮಾಜವನ್ನು ಒಡೆಯೋ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


