ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರಲ್ಲಿ ಗ್ರಾಮದಲ್ಲಿ ಇಂದು ಅಖಿಲ ನಾಮಧಾರಿಗೌಡ ಸಂಘವನ್ನು ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜೇಗೌಡರು, ಗ್ರಾಮದಲ್ಲಿ ಎಲ್ಲಾರು ಅಣ್ಣ ತಮ್ಮಂದಿರಂತೆ ಇರಬೇಕೆಂದು ಯುವಕರಿಗೆ ಕಿವಿ ಮಾತು ಹೇಳಿದರು.
ಗ್ರಾಮದ ಮುಖಂಡರಾದ ತಿಮ್ಮೇಗೌಡರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರವಣೂರು ಗ್ರಾಮದ ಹಿರಿಯರಿಗೆ ಸನ್ಮಾನ ಮಾಡಲಾಯಿತು.
ವಾಲ್ಮೀಕಿ ಯುವಕರ ಸಂಘ ಮತ್ತು ಅಪ್ಪು ಅಭಿಮಾನಿಗಳ ಬಳಗ ಶ್ರವಣೂರು ಹಾಗೂ ಸುತ್ತಮುತ್ತ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


