ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಗುಡ್ಡೆನೆಹಳ್ಳಿ ಗ್ರಾಮದ ಹಿರಿಯ ಜೆಡಿಎಸ್ ಮುಖಂಡರಾದ ಜಿ.ಶಂಕರೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ಗೆದ್ದು ಎಪಿಎಂಸಿ ಮಾಜಿ ಅಧ್ಯಕ್ಷರಾಗಿದ್ದ ಛಾಯಾಶಂಕರೇಗೌಡ ಹಾಗೂ ತುರುವೇಕೆರೆ ಕಾಂಗ್ರೆಸ್ ಮುಖಂಡರು ಹಾಗೂ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕೆ.ಟಿ.ಶಿವಶಂಕರ್ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಜೆ ಡಿ ಎಸ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯ ವೈಖರಿಗಳಿಂದ, ಬೇಸತ್ತು ಬಾರತೀಯ ಜನತಾ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಒಪ್ಪಿ ಶಾಸಕರಾದ ಮಸಾಲ ಜಯರಾಮ್ ರವರ ಸರಳತೆ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ನೂತನ ಸದಸ್ಯರು ತಿಳಿಸಿದರು.
ಮಾಜಿ ಸಂಸದರಾದ ಎಸ್.ಪಿ. ಮುದ್ದುಹನುಮೇಗೌಡರ ನೇತೃತ್ವದಲ್ಲಿ ಹಾರ ಹಾಗೂ ಪಕ್ಷದ ಬಾವುಟ ನೀಡುವ ಮೂಲಕ ನೂತನ ಸದಸ್ಯರನ್ನು ಆತ್ಮೀಯವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಮಸಾಲ ಜಯರಾಮ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ವಿ.ಬಿ.ಸುರೇಶ್, ಡಿ.ಜೆ.ರಂಗಸ್ವಾಮಿ ಮತ್ತಿತರರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1