ಬೆಂಗಳೂರು: ಕಾಲೇಜು ವಾರ್ಷಿಕೋತ್ಸವದಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನೃತ್ಯ ಮಾಡಿದ ವಿದ್ಯಾರ್ಥಿಯ ಮೇಲೆ ದೈವ ಆವಾಹನೆಯಾದ ಘಟನೆ ನಡೆದಿದೆ.
ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕಾಂತಾರದ ಹಾಡಿಗೆ ದೈವ ವೇಷ ಧರಿಸಿ ಪಿಯುಸಿ ವಿದ್ಯಾರ್ಥಿ ನೃತ್ಯ ಮಾಡುತ್ತಿದ್ದ ಈ ವೇಳೆ ದೈವ ಆವಾಹನೆಯಾಗಿದೆ ಅನ್ನೋ ಸುದ್ದಿ ವ್ಯಾಪಕವಾಗಿ ಹಬ್ಬಿದೆ.
ಬೆಂಗಳೂರಿನ ಹೊಂಬೇಗೌಡ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿದ್ಯಾರ್ಥಿ ವಿಶಾಲ್ ಎಂಬಾತನು ವಾರ್ಷಿಕೋತ್ಸವದಲ್ಲಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡಿದ್ದ.
ಬಳಿಕ ವೇದಿಕೆಯಿಂದ ಕೆಳಗಿಳಿದ ವೇಳೆ ದೈವ ಆವಾಹನೆಯಾಗಿದೆ. ಬಳಿಕ ಸಹಪಾಠಿಗಳು ಶಿಕ್ಷಕರು ವಿದ್ಯಾರ್ಥಿಯನ್ನು ಉಪಚರಿಸಿದ್ದಾರೆ. ತಕ್ಷಣವೇ ಆಯೋಜಕರು ಹಾಡು ನಿಲ್ಲಿಸಿದ್ದಾರೆನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


