‘ದಿ ಮಂಕಿ ಮ್ಯಾನ್’ ಖ್ಯಾತಿಯ ಜ್ಯೋತಿರಾಜ್ ಯಾನೆ ಕೋತಿ ರಾಜ್ ಎರಡೇ ತಾಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಕೇವಲ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ.
ಸಮುದ್ರ ಮಟ್ಟದಿಂದ 1,700 ಅಡಿ ಇರುವ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಮೆಟ್ಟಿಲುಗಳ ಸಹಾಯವಿಲ್ಲದೆ ಅನಾಯಾಸವಾಗಿ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಇಂದು ಬೆಳಗ್ಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇವಸ್ಥಾನದ ಉತ್ತರ ಭಾಗದಿಂದ ಗಡಾಯಿಕಲ್ಲು ಏರುವ ಮುನ್ನ 9.50ಕ್ಕೆ ತೆಂಗಿನ ಕಾಯಿ ಒಡೆದು ಹತ್ತಲು ಆರಂಭಿಸಿದ್ದಾರೆ.
ಸುಮಾರು 11.50ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಏರಿ ಕನ್ನಡ ನಾಡಿನ ಬಾವುಟವನ್ನು ಹಾರಿಸುವ ಮೂಲಕ ಕನ್ನಡಭಿಮಾನ ಮೆರೆದಿದ್ದಾರೆ.
ಇವರ ತಂಡದಿಂದೊಗೆ ಕುದುರೆಮುಖ ವನ್ಯಜೀವಿ ವಿಭಾಗದ ಆರ್.ಎಫ್.ಒ. ಸ್ವಾತಿ, ಅರಣ್ಯ ರಕ್ಷಕ ಕಿರಣ್ ಪಾಟೀಲ ಜತೆಗಿದ್ದರು. ಈ ಸಾಹಸವನ್ನು ವೀಕ್ಷಿಸಲು ದೂರದ ಊರು ಗಳಿಂದ ಜನಸ್ತೋಮವೇ ಬಂದು ನೆರೆದಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


