ಈ ಬಾರಿಯ ಏರ್ ಶೋ ಎಲ್ಲರೂ ಹೆಮ್ಮೆಪಡುವಂತಾಗಿದೆ. ಈ ಬಾರಿಯ ಏರ್ ಶೋ ಎಲ್ಲಾ ದಾಖಲೆಗಳನ್ನು ಮೆಟ್ಟಿ ನಿಂತಿದೆ. ಈ ಐದು ದಿನದ ಏರ್ ಶೋನಲ್ಲಿ ದೇಶ, ವಿದೇಶಿ ನಿರ್ಮಿತ ಯುದ್ಧ ವಿಮಾನಗಳು ಹಾರಾಟ ನಡೆಸಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.
ಬೆಂಗಳೂರಿನಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏರ್ ಶೋನಿಂದ ಕರ್ನಾಟಕದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕರ್ನಾಟಕದ ಯುವ ಜನತೆ ಹೊಸ ಹೊಸ ತಂತ್ರಜ್ಞಾನ ಸ್ವಾಗತಿಸುತ್ತಿದ್ದಾರೆ. ಕರ್ನಾಟಕ ತಂತ್ರಜ್ಞಾನದಲ್ಲಿ ಮುಂದಿದೆ ಎಂದು ಹೇಳಿದರು.
ಏರ್ ಶೋ ಮೂಲಕ ಹೊಸ ಹೊಸ ಉದ್ಯೋಗ ಸೃಷ್ಟಿಯಾಗಲಿವೆ. ಇದೊಂದು ಕೇವಲ ಕಾರ್ಯಕ್ರಮ ಆಗಿ ಉಳಿದಿಲ್ಲ. ಇದು ವಿಶ್ವದಲ್ಲಿ ಭಾರತದ ಶಕ್ತಿಯನ್ನು ಪ್ರದರ್ಶಿಸುತ್ತದೆ. ಏರ್ ಶೋ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇಂತಹ ಒಂದು ಅದ್ಭುತ ಕ್ಷಣಕ್ಕೆ ಬೆಂಗಳೂರು ಸಾಕ್ಷಿಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


