ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾದ 2ನೇ ಫೋಕ್ಸೋ ಪ್ರಕರಣ ಸಂಬಂಧ ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಪೊಲೀಸರು 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಎ ಮತ್ತು ಬಿ ಎರಡು ಭಾಗವಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾತ್ರವಲ್ಲದೆ, 12 ಮತ್ತು 14 ವರ್ಷದ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಸಿಆರ್ಪಿಸಿ 161 ಅಡಿ ದಾಖಲಿಸಿಕೊಳ್ಳಲಾಗಿದೆ. ಟಿವಿ ನೋಡುತ್ತ ರೂಮಿನಲ್ಲಿ ಕುಳಿತಾಗ ಮುರುಘಾಶ್ರೀ ರೇಪ್ ಮಾಡಿದರು ಎಂದು 12 ವರ್ಷದ ಬಾಲಕಿ ಹೇಳಿಕೆ ನೀಡಿದ್ದು, ಸ್ವಾಮೀಜಿ ನೀಡಿದ ಚಾಕ್ಲೇಟ್ ತಿಂದ ಬಳಿಕ ನಿದ್ದೆ ಬಂದು ಮಲಗಿದ್ದೆ, ಎಂದು 14 ವರ್ಷದ ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದಾಳೆ.
ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಮಕ್ಕಳು ಮತ್ತು ಕುಟುಂಬಸ್ಥರ ಅನುಕಂಪ, ಗೌರವ ಗಳಿಸಿ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ಕೊಠಡಿಗೆ ಕರೆಸಿಕೊಂಡು ನಿದ್ದೆ ಭರಿಸುವ ಚಾಕ್ಲೆಟ್ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸದ್ಯ ಪೊಲೀಸರು, ಕಲಂ 376(C), 376(2)(n), 376(AB), 376(3), r/w 34, ಐಪಿಸಿ ಮತ್ತು u/s 5(L), 6,7 POCSO Act -2012 ಮತ್ತು sec : 3(f), ಧಾರ್ಮಿಕ ಕೇಂದ್ರ ದುರ್ಬಳಕೆ 1988 ಮತ್ತು sec 77 Juvenile Justice Act 2015, ಸಂತ್ರಸ್ತರು ಸಿಆರ್ಪಿಸಿ 161, 164 ಅಡಿ ನೀಡಿದ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


