ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇರಲ್ಲ ಔಷಧಿ ಗುಣವಿದೆ ಎಂದು ವರದಿ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಪರಿಷತ್ ನಲ್ಲಿ ಇಂದು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಒಂದು ವರ್ಷದ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆಯೇ ಎಂಬ ಬಗ್ಗೆ ಸಂಶೋಧನೆ ನಡೆಸಲು ರಾಮಯ್ಯ ತಾಂತ್ರಿಕವಿವಿಗೆ ಹೇಳಿದ್ದೆವು . ತಾಂತ್ರಿಕ ವಿವಿ ಸಂಶೋಧನಾ ವರದಿ ನೀಡಿದೆ.
ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಇರಲ್ಲ ಔಷಧಿ ಇರುತ್ತೆ ಎಂದು ವರದಿ ಸಲ್ಲಿಕೆ ಮಾಡಿದೆ. ಆದರೆ ಹಿಂದಿನ ಸರ್ಕಾರ ಅಡಿಕೆಯಲ್ಲಿ ಕ್ಯಾನ್ಸರ್ ಗುಣ ಇದೆ ಎಂದಿತ್ತು . ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ ಎಂದು ಅರಗ ಜ್ಞಾನೇಂದ್ರ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


