nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂಗಿಲ್ಲದ ಮುಖ್ಯೋಪಾದ್ಯಾಯರು, ಮೂಗಿಲ್ಲದ ಶಿಕ್ಷಣ ಇಲಾಖೆ ಅಧಿಕಾರಿಗಳು | ಕೊಳಚೆ ನಾರುತ್ತಿದೆ ಶಾಲೆಯ ಆವರಣ!
    ರಾಜ್ಯ ಸುದ್ದಿ February 15, 2023

    ಮೂಗಿಲ್ಲದ ಮುಖ್ಯೋಪಾದ್ಯಾಯರು, ಮೂಗಿಲ್ಲದ ಶಿಕ್ಷಣ ಇಲಾಖೆ ಅಧಿಕಾರಿಗಳು | ಕೊಳಚೆ ನಾರುತ್ತಿದೆ ಶಾಲೆಯ ಆವರಣ!

    By adminFebruary 15, 2023No Comments2 Mins Read
    mpress

    Provided by
    Provided by

    ತುಮಕೂರು: ಶಾಲೆಯ ನೈರ್ಮಲ್ಯ ಕಾಪಾಡಬೇಕಾದ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಶಾಲೆಯ ಮುಂಭಾಗದಲ್ಲಿ ಕೊಳಚೆ ತುಂಬಿದ್ದರೂ, ಸ್ವಚ್ಛಗೊಳಿಸಲು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವ ಘಟನೆ  ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ನಡೆದಿದ್ದು, ಶಾಲೆಯ ಮುಖ್ಯೋಪಾದ್ಯಾಯರು  ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಿರ್ಲಕ್ಷ್ಯವಹಿಸಿದ್ದಾರೆ ಅನ್ನೋ ಆಕ್ರೋಶದ ಮಾತುಗಳು ಇದೀಗ ಕೇಳಿ ಬಂದಿವೆ.

    ತುಮಕೂರು ಮಹಾನಗರ ಪಾಲಿಕೆ, ಬಸ್ ನಿಲ್ದಾಣ ಸಮೀಪದ, ಮೈಸೂರು ಮಹಾರಾಜರು ಕೊಡುಗೆಯಾಗಿ ನೀಡಿರುವ ಜಾಗದಲ್ಲಿ ಕಟ್ಟಿರುವ ಹಾಗೂ ಕೆಆರ್ ಜಿ ಎಂಎಸ್ ಎಂಬ ಶಾಲೆಯ ಆವರಣಕ್ಕೆ ಹೊಂದಿಕೊಂಡಂತಿರುವ,  ತುಮಕೂರು ನಗರ ಹೃದಯ ಭಾಗದಲ್ಲಿರುವ ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ಇಂತಹದ್ದೊಂದು ದುಸ್ಥಿತಿ ಕಂಡು ಬಂದಿದ್ದು, ಶಾಲೆಯ ಸ್ವಚ್ಚವಾಗಿಡದೇ ನಿರ್ಲಕ್ಷ್ಯವಹಿಸಲಾಗಿದೆ.

    ಮಕ್ಕಳು ಊಟ ಮಾಡಿ ಕೈ ತೊಳೆಯಲು ಸರಿಯಾದ ವ್ಯವಸ್ಥೆ ಇಲ್ಲದೇ, ಶಾಲೆಯ ಆವರಣದಲ್ಲಿ ಮಕ್ಕಳು ಊಟದ ಬಳಿಕ ಎಸೆದ ಅನ್ನ, ಕೈ ತೊಳೆದ ನೀರು ಕೊಳೆಯಾಗಿ ಗಬ್ಬೆದ್ದು ನಾರುತ್ತಿದೆ. ಇದರ ಬಗ್ಗೆ ಯಾರ ಗಮನಕ್ಕೆ ತಂದರೂ ಯಾರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಮುಖ್ಯೋಪಾದ್ಯಾಯರನ್ನು ಈ ಬಗ್ಗೆ ಕೇಳಿದರೆ, ತನಗೇನೂ ಕೇಳಿಸಿಲ್ಲ ಅನ್ನೊವಂತೆ ಅವರು ಹೋಗುತ್ತಿದ್ದಾರೆ. ಸಿಬ್ಬಂದಿಗಳ ಜೊತೆಗಂತೂ ಮಾತನಾಡುವ ಸ್ಥಿತಿಯೂ ಇಲ್ಲ ಎಂದು ಪೋಷಕರು ದೂರಿದ್ದಾರೆ.

    ಈ ಬಗ್ಗೆ ನಮ್ಮ ತುಮಕೂರು ವರದಿಗಾರರು ಒಂದು ವಾರಕ್ಕೂ ಮುಂಚೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮಾಹಿತಿ ನೀಡಿದ್ದರು.  ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಶಾಲೆಯ ಸ್ವಚ್ಛತೆಯ ಸಮಸ್ಯೆಯ ಹಿನ್ನೆಲೆಯಲ್ಲಿ ಪೋಷಕರೊಬ್ಬರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುವುದಾಗಿ ನಿರ್ಧರಿಸಿದ್ದರು. ಟಿಸಿ ತೆಗೆದುಕೊಳ್ಳಲು ಕೂಡ ನಿರ್ಧರಿಸಿದ್ದರು. ಆದರೆ ಸರ್ಕಾರಿ ಶಾಲೆ ಉಳಿಯ ಬೇಕು ಅನ್ನೋ ದೃಷ್ಟಿಯಿಂದ ನಮ್ಮತುಮಕೂರು ಪ್ರತಿನಿಧಿ ಅವರನ್ನು ಮನವೊಲಿಸಿದ್ದರು. ಆದರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೇ ಈ ಬಗ್ಗೆ ನಿರ್ಲಕ್ಷ್ಯವಹಿಸಿದ್ದರಿಂದಾಗಿ ಮತ್ತೆ ಪೋಷಕರು ಕರೆ ಮಾಡಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.


    Provided by
    Provided by

    ಸರ್ಕಾರಿ ಶಾಲೆಗಳಿಗೆ ಇಂದಿನ ದಿನಗಳಲ್ಲಿ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಕಾಣುತ್ತಿದೆ. ಇಷ್ಟೊಂದು ಸವಾಲುಗಳಿದ್ದರೂ, ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಲೇ ಇದೆ. ಶಾಲೆಯ ಆಡಳಿತ ಮಂಡಳಿಗಳು, ಕೇವಲ ಪಾಠ ಮಾಡಿಸುವುದು ಮಾತ್ರ ನಮ್ಮ ಜವಾಬ್ದಾರಿ ಅಂದುಕೊಂಡಂತಿದೆ. ಶಾಲೆಯ ಸ್ವಚ್ಛತೆಯ ಬಗ್ಗೆ ಕೊಂಚವೂ ತಲೆಕೆಡಿಸಿಕೊಳ್ಳದ ಇವರ ಮನಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇವರ ಮನೆಯ ಆವರಣವನ್ನು ಇವರು ಈ ರೀತಿಯಾಗಿ ಇರಲು ಬಿಡುತ್ತಾರೆಯೇ? ಬಡ ಮಕ್ಕಲು ಕಲಿಯುವ ಶಾಲೆಯ ಮುಂಭಾಗದಲ್ಲಿರುವ ಕೊಳಚೆ ಇವರ ಕಣ್ಣಿಗೆ ಬೀಳುತ್ತಿಲ್ಲವೇ? ಗಬ್ಬು ನಾತ ಇವರ ಮೂಗಿಗೆ ಬಡಿಯುತ್ತಿಲ್ಲವೇ? ಅನ್ನೋ ಆಕ್ರೋಶದ ,ಮಾತುಗಳು ಕೇಳಿ ಬಂದಿವೆ.

     ವರದಿ: ಗಣೇಶ್ ಮಾರ್ನಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.