ಕಾಂತಾರ ಚಿತ್ರದ ಮೂಲಕ ಪಿಲ್ಮ ಇಂಡಸ್ಟ್ರಿಯಲ್ಲೇ ದಾಖಲೆ ಬರೆಯುವುದರ ಮೂಲಕ ಸ್ಯಾಂಡಲ್ ವುಡ್ ಖ್ಯಾತಿಯನ್ನು ಜಾಗತಿಕವಾಗಿ ಹೆಚ್ಚಿಸಿದ ಯಶಸ್ಸು ನಟ ರಿಷಬ್ ಶೆಟ್ಟಿಗೆ ಸಲ್ಲುತ್ತದೆ.
ಕರಾವಳಿ ತೀರದ ಕಥೆಹೊತ್ತು ಬಂದಿದ್ದ ಕಾಂತಾರವು 400 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ರಿಷಬ್ ಶೆಟ್ಟಿ ಅವರ ಕೆಲಸದ ಬಗ್ಗೆ ಮೆಚ್ಚುಗೆಯನ್ನು ಹೆಚ್ಚಿಸಿತ್ತು. ಇದರಿಂದ ರಿಷಬ್ ಶೆಟ್ಟಿ ಅವರಿಗೆ ಈಗ ‘ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ಈ ಸಮಾರಂಭ ನಡೆಯಲಿದೆ.
ಈ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಮೂಲಕ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


