ಕೆ.ಆರ್.ಪೇಟೆ: ಕೆ.ಆರ್.ಪೇಟೆಯಲ್ಲಿ ಕ್ಷೇತ್ರದಲ್ಲಿ ಈಗ ಇರುವ ಸರ್ಕಾರ ಯಾವುದೆ ಅಭಿವೃದ್ದಿ ಕೆಲಸ ಮಾಡಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿಖಿಲ್, ಕೆ.ಆರ್.ಪೇಟೆ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ ಮತ್ತು ಜೆಡಿಎಸ್ ಪಕ್ಷ ನನಗೆ ತಾಯಿ ಇದ್ದಂತೆ. ತಾಯಿ ದ್ರೋಹ ಮಾಡಿ ಹೋದ ಹಾಲಿ ಶಾಸಕ ಹಾಗೂ ಮಂತ್ರಿ ಅಗಿರುವವರು ಯಾವುದೆ ಕೆಲಸ ಮಾಡಿಲ್ಲ ಎಂದರು.
ಈ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದ ವೇಳೆ ಅಕ್ಕಿಹೆಬ್ಬಾಳು ಹೋಬಳಿ ಮಟ್ಟದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದರು. ನಂತರ ರೋಡ್ ಶೋ ಮುಖಾಂತರ ವೇದಿಕೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಎಚ್.ಟಿ.ಮಂಜು, ಎ.ಆರ್.ರಘು, ಶ್ರೀನಿವಾಸ್, ಜಮೀರ್ ಅಹಮ್ಮದ್ ಮತ್ತು ಹೋಬಳಿಯ ಮಟ್ಟದ ಜೆಡಿಎಸ್ ನ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


