ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದರು.
ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ.
ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ ಆಧಾರದಲ್ಲಿ ಚುನಾವಣೆಗಳು ನಡೆಯುವುದಾದರೆ ಸುರೇಶಗೌಡ ಅವರು ಸೋಲುವುದಿಲ್ಲ.
ರಾಜಕೀಯದಲ್ಲಿ ಏರುಪೇರುಗಳಾಗುತ್ತವೆ. ಈ ಬಾರಿ ಚುನಾವಣೆಯಲ್ಲಿ ಸುರೇಶ್ ಗೌಡ ಅವರು ಗೆಲ್ಲುತ್ತಾರೆ ಎಂಬ ವರದಿಗಳಿವೆ. ಎಲ್ಲರೂ ಸೇರಿ ಅವರನ್ನು ಗೆಲ್ಲಿಸುವಂತೆ ಸೂಚಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy