ಅಗರ್ತಲಾ: ತ್ರಿಪುರಾ ವಿಧಾನ ಸಭೆಗೆ ಇಂದು ಚುನಾವಣೆ ನಡೆಯುತ್ತಿದ್ದು 60 ಸದಸ್ಯರ ಬಲ ಹೊಂದಿರುವ ವಿಧಾನ ಸಭೆ ಚುನಾವಣೆಗೆ 3,328 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 1,100 ಸೂಕ್ಷ್ಮ ಮತ್ತು 28 ನಿರ್ಣಾಯಕ ಮತಗಟ್ಟೆಗಳಿದೆ.
ಇಂದು ನಡೆಯುವ ಚುನಾವಣೆಯಲ್ಲಿ 28.13 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದು, ಒಟ್ಟು 259 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ 55 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದು ತನ್ನ ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ ಪಕ್ಷಕ್ಕೆ ಐದು ಸ್ಥಾನಗಳನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ ಎಡ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು ಸಿಪಿಐ(ಐ) 47ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು ಕಾಂಗ್ರೆಸ್ 13 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


