ವಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಕಲಬುರಗಿ ಜಿಲ್ಲೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಅಶ್ವಥ್ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಶ್ವತ್ಥ್ ನಾರಾಯಣ ಅವರು ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದ್ದಾರೆ. ಸಂವಿಧಾನ ಬದ್ಧವಾಗಿ ಕಾರ್ಯ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂಲ ತಳಹದಿಯನ್ನೇ ಉಲ್ಲಂಘಿಸಿದ್ದಾರೆ.
ಶಾಂತಿ ಸುವ್ಯವಸ್ಥೆಯನ್ನು ಕದಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಐಪಿಸಿ ಸೆಕ್ಷನ್ 353, 504, 506ರ ಅಡಿಯಲ್ಲಿ ಅಪರಾಧವೆಸಗಿದ್ದಾರೆ. ಕೂಡಲೇ ಅಶ್ವತ್ಥ್ ನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಕಲಬುರಗಿ ಎಸ್ ಪಿ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಚಿವ ಅಶ್ವಥ್ ನಾರಾಯಣ್ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು ಎಂದು ಮಲ್ಲೇಶ್ವರಂ ಪೊಲೀಸ್ ಸ್ಟೇಷನ್ ಗೆ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


