ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರದ ಇ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡ ಪತ್ರವನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3ಲಕ್ಷ 7 ಸಾವಿರ ಕೋಟಿ ರೂ. ಮೊತ್ತದ ಅತಿ ದೊಡ್ಡ ಗಾತ್ರದ ಬಜೆಟ್ ಇದಾಗಿದ್ದು. ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ನೀಡಲಾಗಿದ್ದು ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಘೋಷಿಸಲಾಗಿದೆ.
ಚುನಾವಣೆ ಹೊಸ್ತಿಲಲ್ಲೆ ಕೊನೆಯ ಬಜೆಟ್ ಮಂಡನೆಯಾಗುತ್ತಿದ್ದು ಜನರನ್ನು ಸರಕಾರದತ್ತ ಸೆಳೆಯುವ ಮಾದರಿಯಲ್ಲಿ ಬಜೆಟ್ ಮಂಡನೆಯಾಗಬಹುದೆಂಬ ಕುತೂಹಲ ಎಲ್ಲರಲ್ಲಿದ್ದು ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಬಜೆಟ್ ನಲ್ಲಿ ರೈತರಿಗೆ ಆಫರ್ ನೀಡಲಾಗಿದ್ದು ಬಡ್ಡಿ ರಹಿತ ಸಾಲ ಸೌಲಭ್ಯ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ಸೌಲಭ್ಯ ನೀಡುವುದಾಗಿ ಬಜೆಟ್ ಮಂಡಿಸಲಾಗಿದೆ.
ಇನ್ನೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 781 ಕೋಟಿ ರೂ. ಆರೋಗ್ಯ ಕ್ಷೇತ್ರಕ್ಕೆ ಅನುದಾನ ನೀಡಲಾಗಿದ್ದು 438 ನಮ್ಮ ಕ್ಲಿನಿಕ್ ಸ್ಥಾಪನೆ ಮಾಡುವುದರ ಜೊತೆಗೆ 1000 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 165 ಕೋಟಿ ರೂ.ದಲ್ಲಿ ಆಸ್ಪತ್ರೆಗಳ ಸ್ಥಾಪನೆಗೆ ಮೀಸಲಿಡಲಾಗುತ್ತಿದ್ದು 28 ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಮತ್ತು ಕ್ಯಾನ್ಸರ್ ಪತ್ತೆ ಉಪಕರಣಗಳ ಖರೀದಿಗೆ 12 ಕೋಟಿ ಮೀಸಲಿಡಲಾಗಿದೆ. ನಗು ಮಗು ಯೋಜನೆಗೆ 12.5 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


