ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ನ್ಯಾಯ ಕೋರಿ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಮಹಿಳೆಯೋರ್ವಳು, ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಬಂದ ಘಟನೆ ಮಧ್ಯಪ್ರದೇಶದ ಶಾದೂಲ್ ಜಿಲ್ಲೆಯಲ್ಲಿ ನಡೆದಿದೆ.
ಸೋಹಾಗ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ವ್ಯಕ್ತಿ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಹೋಗಿದ್ದರು.
ಇನ್ನೂ ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ಆಕ್ರೋಶಗೊಂಡ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರೆತಂದಿದ್ದಾರೆ.
ಬಳಿಕ ಇವರ ದೂರು ಆಲಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುಕೇಶ್ ವೈಶ್ಯ, ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


