ನಮ್ಮ ತುರುವೇಕೆರೆ ತಾಲ್ಲೂಕು ಅನೇಕ ಕಲಾವಿದರನ್ನು ನಮ್ಮ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದೆ, ಇಂತಹ ಜಾಗದಲ್ಲಿ ನಾನು ಒಬ್ಬ ಕಲಾವಿದನಾಗಿ ಈ ತಾಲೂಕಿನಲ್ಲಿ ಕೆಲಸ ಮಾಡಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದು ಚಿತ್ರ ನಟ, ಎಎಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಟೆನ್ನಿಸ್ ಕೃಷ್ಣ ಹೇಳಿದರು.
ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಎಎಪಿ ಪಕ್ಷದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಪಕ್ಷದ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ಅಭಿವೃದ್ಧಿಯ ಚಿಂತನೆಯ ಎಎಪಿ ಪಕ್ಷವು ಬಡವರ ಪರವಾಗಿ ಇರುವ ಒಳ್ಳೆಯ ನಾಯಕತ್ವದ ಪಕ್ಷವಾಗಿದ್ದು, ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷವಾಗಿದೆ ಎಂದರು.
ಕೇಜ್ರಿವಾಲ್ ಅವರ ನಾಯಕತ್ವದಲ್ಲಿ ನಾವುಗಳು ಈ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ. ಜೊತೆಗೆ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ಬಿಡುವುದಿಲ್ಲ, ಜೊತೆಗೆ 5,000 ರೂ. ಬೆಂಬಲ ಬೆಲೆಯನ್ನು ಕೊಬ್ಬರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಎಎಪಿ ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಡಾ.ವಿಶ್ವನಾಥ್, ಖಜಾಂಚಿ ಕೃಷ್ಣಮೂರ್ತಿ, ಪ್ರೇಮಕುಮಾರಿ, ಪ್ರಭುಸ್ವಾಮಿ, ರುಜ್ವಾನ ಬಾನು, ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಮಧು, ಇನ್ನು ಅನೇಕ ಎ ಎ ಪಿ ಪಕ್ಷದ ತಾಲೂಕು ಮುಖಂಡರುಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy