ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ನಡೆದಿದೆ.
ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಪಾಗಲ್ ಪ್ರೇಮಿ ಸುಮಂತ್ (30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೈಪಾಸ್ ರಸ್ತೆಗೆ ಮಾತನಾಡಬೇಕಿದೆ ಎಂದು ಯುವತಿಯನ್ನು ಕರೆಸಿಕೊಂಡಿದ್ದಾನೆ. ಕಾಲ್ ಮಾಡಿದ ಕಾರಣ ತಮ್ಮನ ಜೊತೆಗೆ ಯುವತಿ ಹೋಗಿದ್ದಾಳೆ. ಈ ವೇಳೆ ಮುಖಕ್ಕೆ ಆಸಿಡ್ ಎರಚಿ ಸುಮಂತ್ ಬೈಕ್ ನಲ್ಲಿ ಪರಾರಿಯಾಗಿದ್ದಾನೆ.
ಯುವತಿಗೆ ಕನಕಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸಿಡ್ ದಾಳಿ ನಡೆಸಿದ ಸುಮಂತ್ ನ್ನು ಕನಕಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


