ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿ ನನ್ನ ಕಿಡ್ನಿ ಮಾರಿ ಚುನಾವಣಾ ಖರ್ಚು ಹೊಂದಿಸುತ್ತೇನೆ ಎಂದು ಯುವಕನೋರ್ವ ಹುಚ್ಚಾಟದ ಹೇಳಿಕೆ ನೀಡಿದ್ದು ಭಾರಿ ವೈರಲ್ ಆಗಿದೆ.
ಕೆಂಕೆರೆ ಗ್ರಾಮದ ಪ್ರಭುಕುಮಾರ್ ಹುಚ್ಚಾಟದ ಹೇಳಿಕೆ ನೀಡಿದ್ದು ತುಮಕೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ 7 ಮಂದಿ ಕಾಂಗ್ರೆಸ್ ಪಕ್ಷದ ಟಿಕೆಟ್ ರೇಸ್‌ನಲ್ಲಿದ್ದಾರೆ. ವೈ.ಸಿ ಸಿದ್ದರಾಮಯ್ಯ ಕೂಡ ಪ್ರಭಲ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೇಟ್ ನೀಡುವಂತೆ ಮನವಿ ಮಾಡಿಕೊಂಡಿರುವ ಯುವಕ ತಾನು ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ. ಈ ವೇಳೆ ಚುನಾವಣೆಗೆ ನಿಲ್ಲಲು ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರು ಎಂಬುದಾಗಿಯೂ ಯುವಕ ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy