ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ.
39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಹೃದಯಾಘಾತಕ್ಕೀಡಾಗಿದ್ದ ಅವರ ಸ್ಥಿತಿ ಚಿಂತಾಜನಕವಾಗಿತ್ತು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳ ಚಿಕಿತ್ಸೆಯ ಬಳಿಕವೂ ಅವರು ಚೇತರಿಸಿಕೊಳ್ಳದೇ ಇದೀಗ ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


