ಹಾಸನ ಜಿಲ್ಲೆ ಅರಕಲಗೂಡು ನಗರದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ.
ಸರ್ಕಲ್ ಇನ್ಸ್‌ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಇಂದಿರಾ ಅವರು ವಿದ್ಯಾರ್ಥಿನಿಯರ ಹೇಳಿಕೆ ಪಡೆದು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


