ದೆಹಲಿ ಮದ್ಯ ನೀತಿ ಹಗರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಪ್ರಶ್ನಿಸಲಿದೆ. ದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಸಿಬಿಐ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ.ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್‌ನಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ದಾರೆ.
ಸಿಸೋಡಿಯಾ ಮತ್ತು ಇತರರ ವಿರುದ್ಧದ ಪ್ರಕರಣವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ, 477 ಎ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿದೆ.ಸದ್ಯ ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ. ಮನೀಷ್ ಸಿಸೋಡಿಯಾ ಅವರ ಮನೆ ಮತ್ತು ಕಚೇರಿಯಲ್ಲೂ ಸಿಬಿಐ ಶೋಧ ನಡೆಸಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಹೇಳಿದ್ದಾರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


