ಆರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯ ಶಿರಧನಹಳ್ಳಿಯ ಶ್ರೀ ಶನಿದೇವರ ಉತ್ಸವವು ವಿಜೃಂಭಣೆಯಿಂದ ನೆರವೇರಿತು.
ಪ್ರತಿ ವರ್ಷದಂತೆ ಈ ವರ್ಷ ಮಹಾಶಿವರಾತ್ರಿ ನಿಮಿತ್ತವಾಗಿ. ಕಾವೇರಿ ನದಿ ಹತ್ತಿರ ದೇವರನ್ನು ಶುಚಿಗೊಳಿಸಿ, ದಕ್ಷಿಣ ಕಾಶಿ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಮಲ್ಲರಾಜ ಪಟ್ಟಣ, ಉಪ್ಪರ್ ಕೊಪ್ಪಲು, ರಾಮನಾಥಪುರದ ಮುಖಾಂತರ ಹಾದು ಹೋಗಿ, ಶಿರಧನಹಳ್ಳಿ ಶ್ರೀ ಶನಿದೇವರ ದೇವಸ್ಥಾನಕ್ಕೆ ಪೂರ್ಣಗೊಂಡಿತು.
ಈ ಸಂದರ್ಭದಲ್ಲಿ ವೀರಗಾಸೆ ಮತ್ತು ಡೊಳ್ಳು ಕುಣಿತ ಸಹ ಏರ್ಪಡಿಸಲಾಗಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ರಾತ್ರಿ 8 ಗಂಟೆಗೆ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಸ್ರಹಸ್ರಾರು ಸಂಖೈಯಲ್ಲಿ ಸೇರಿ ಶ್ರೀ ಶನಿದೇವರ ಕೃಪೆಗೆ ಪಾತ್ರರಾದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


