ರಾಜಹಂಸಗ ಕೋಟೆಗೆ ಕಾಂಗ್ರೆಸ್ಸಿನ ಕಾರ್ಯಕರ್ತರು ಭೇಟಿ ನೀಡಿದರು ವಿಧಾನಪರಿಷತ್ ಸದಸ್ಯರು ಚನ್ನರಾಜ ಹಟ್ಟಿ ಹೊಳಿ ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಮೃಣಾಲ್ ಹೆಬ್ಬಾಳ್ಕರ್ ನೇತೃತ್ವದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ ಮುಖಂಡರಾದ ಸಾತೇರಿ ಬೆಳವಟ್ಕರ್ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಟೆ ಪರಿಸರದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿಯ ನಿಮಿತ ಪೂಜೆ ಸಲ್ಲಿಸಿ ನಂತರ ಭವ್ಯ ದಿವ್ಯ ವಾದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿದರು.
ಇದೆ ವೇಳೆ ಬೆಳವಟ್ಕರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಕ್ಷೇತ್ರ ವನ್ನು ಅಭಿವೃದ್ಧಿಪಡಿಸಬೇಕು. ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ದಿವ್ಯವಾದ ಮೂರ್ತಿಯನ್ನು ನಿರ್ಮಾಣ ಮಾಡಬೇಕು ಎಂದು ನಮ್ಮ ನಾಯಕಿಯಾದ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂಕಲ್ಪ ಮಾಡಿದರು.
ಕೋಟೆ ಸಂರಕ್ಷಿಸುವ ನಮ್ಮೆಲ್ಲರ ಜವಾಬ್ದಾರಿಯಾಗಿತ್ತು. ಸುತ್ತಮುತ್ತಲಿನ ಗ್ರಾಮಗಳು ಕಳೆದ 15 ವರ್ಷಗಳಿಂದ ಕೋಟೆ ಅವರನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದವು ಆದರೆ ಈಗ ಅದರ ಭಯ ಇಲ್ಲದಂತಾಗಿದೆ ಕಾರಣ ಈ ಕ್ಷೇತ್ರಕ್ಕೆ ದೃಢ ನೇತೃತ್ವ ಸಿಕ್ಕದೆ ಈ ಕೋಟೆ ಆವರಣ ಅಭಿವೃದ್ಧಿ ಹೊಂದುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


