ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಬೀದಿಗೆ ಬಂದಿದ್ದು, ಇದೇ ವೇಳೆ ಸರ್ಕಾರದ ವರ್ಚಸ್ಸಿಗೆ ಈ ಗಲಾಟೆಗಳು ಕಾರಣವಾಗುತ್ತಿರುವುದರಿಂದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಇಬ್ಬರು ಅಧಿಕಾರಿಗಳನ್ನು ಜೊತೆಯಾಗಿ ಅಥವಾ ಪ್ರತ್ಯೇಕವಾಗಿ ಕರೆದು ಮಾತನಾಡಿ ಸ್ಪಷ್ಟೀಕರಣ ಪಡೆದು ಕಿವಿಮಾತು ಹೇಳಿ ಕಳುಹಿಸಲು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ ಎನ್ನಲಾಗಿದೆ.
ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳಿಬ್ಬರೂ ಕಳೆದ 24 ಗಂಟೆಯಿಂದ ಪರಸ್ಪರ ದೋಷಾರೋಪಣೆಗೆ ಇಳಿದಿದ್ದು, ಕಾರ್ಯಾಂಗದ ಕ್ಷಮತೆ ಮೇಲೆ ಪರಿಣಾಮ ಬೀರಲಿದೆ. ಐಪಿಎಸ್, ಐಎಎಸ್ ಹುದ್ದೆಯ ಘನತೆ-ಗೌರವ ಜನಸಾಮಾನ್ಯರ ದೃಷ್ಟಿಯಲ್ಲಿ ಕುಸಿಯಲಿದೆ. ಸರ್ಕಾರದ ಬಗ್ಗೆ ಕೆಟ್ಟ ಅಭಿಪ್ರಾಯಕ್ಕೆ ಕಾರಣವಾಗಲಿದೆ ಎಂದು ಸಿಎಂ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


