ತುಮಕೂರು: ಕಾಲೇಜು ಶುಲ್ಕ ಪಾವತಿಸಿಲ್ಲ ಎಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ತುಮಕೂರಿನ ಎಸ್.ಎಸ್.ಪುರಂನ ಆಕಾಶ್ ಕಾಲೇಜಿನಲ್ಲಿ ನಡೆದಿದ್ದು, ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಿಗ್ಗೆ ಪರೀಕ್ಷೆಗೆ ಹಾಜರಾಗಲು ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಇಂದು ಕಾಲೇಜಿನಲ್ಲಿ ಕನ್ನಡ ಪರೀಕ್ಷೆ ನಡೆಯುತ್ತಿದ್ದು, ಕಾಲೇಜು ಶುಲ್ಕ ಪಾವತಿಸಿದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಟ್ಟು ಪರೀಕ್ಷೆ ನಡೆಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.
ಇನ್ನೂ ವಿಚಾರ ತಿಳಿದು ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಈ ಕಾಲೇಜು ಏಟ್ರಿಯ ಅನ್ನೋ ಹೆಸರಿನಿಂದ ಈವರೆಗೆ ಕಾರ್ಯಾಚರಿಸುತ್ತಿತ್ತು. ಆ ಬಳಿಕ ದಿಢೀರನೇ ಕಾಲೇಜಿನ ಹೆಸರು ಆಕಾಶ್ ಎಂದು ಬದಲಾವಣೆ ಮಾಡಲಾಗಿದೆ. ಜೊತೆಗೆ ಆಡಳಿತ ಮಂಡಳಿ ಕೂಡ ಬದಲಾವಣೆಯಾಗಿದೆ. ಕಾಲೇಜಿನ ಆಡಳಿತ ಮಂಡಳಿಗೆ ಹಣವ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಇದೀಗ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಕಾಲೇಜಿನ ಗೊಂದಲದ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA