ಕೊರಟಗೆರೆ: ಲಾರಿ ಹಾಗೂ ಗಾರ್ಮೆಂಟ್ಸ್ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ನಡುವೆ ಕೊರಟಗೆರೆ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಇಂದು ಸಂಜೆ ಈ ದುರ್ಘಟನೆ ನಡೆದಿದ್ದು, ಸಂಜೆ ಕೆಲಸ ಮುಗಿಸಿ ಕಾರ್ಮಿಕರು ತಮ್ಮ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ಸುಮಾರು 75ಕ್ಕೂ ಅಧಿಕ ಕಾರ್ಮಿಕರು ಇದ್ದರು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಥಳಕ್ಕೆ ಆಗಮಿಸಿದ್ದು, ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ತಮ್ಮ ವಾಹನದಲ್ಲೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA