ಇಬ್ಬರು ಅಧಿಕಾರಿಗಳಾದ ಡಿ.ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿನಡುವಿನಕಿತ್ತಾಟದಿಂದಮುಜುಗರ ಕ್ಕೀಡಾಗಿರುವ ರಾಜ್ಯ ಸರ್ಕಾರ ಇದೀಗ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ನೋಟಿಸ್ ನೀಡಿರುವ ಸಿಬ್ಬಂದಿ ಆಡಳಿತ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್, ಬಹಿರಂಗ ಹೇಳಿಕೆ ನೀಡದಂತೆ, ಫೇಸ್ ಬುಕ್ ಪೋಸ್ಟ್ ಹಾಕದಂತೆ ಇಬ್ಬರಿಗೆ ಸೂಚನೆ ನೀಡಿದ್ದಾರೆ.
ಇಬ್ಬರ ಕಿತ್ತಾಟದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ ಇದು ಭಾರತೀಯ ಸರ್ವಿಸ್ ನಿಯಮ ಉಲ್ಲಂಘನೆಯಾಗಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಸಕ್ಷಮ ಪ್ರಾಧಿಕಾರದ ಮುಂದೆ ಆರೋಪ ಮಾಡಬಹುದು. ಆದರೆ ಮಾಧ್ಯಮದ ಮುಂದೆ ಆರೋಪ ಮಾಡಿದ್ದೀರಾ..? ಹೀಗಾಗಿ ಮಾಧ್ಯಮದ ಮುಂದೆ ಹೋಗಬಾರದು ಇಬ್ಬರು ಅಧಿಕಾರಿಗಳು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ ಸೂಚನೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


