ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಕೊಟಗಾರಲಹಳ್ಳಿ ಶಾಲೆಯ ಸಹ ಶಿಕ್ಷಕ ಪಿ.ನಾಗಭೂಷಣ್ ವಿದ್ಯಾರ್ಥಿನಿಯರ ಮೊಬೈಲ್‌ಗಳಿಗೆ ಅಸಭ್ಯ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಆತನನ್ನು ಅಮಾನತು ಮಾಡಲಾಗಿದೆ.
ಶಾಲಾ ವಿದ್ಯಾರ್ಥಿನಿಯರಿಗೆ ಅಸಭ್ಯ ಸಂದೇಶ ಕಳುಹಿಸುವುದು ಹಾಗೂ ಶಾಲಾ ವಿದ್ಯಾರ್ಥಿನಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಸಂದರ್ಭದಲ್ಲಿ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದರು. ಈ ಆರೋಪಗಳ ಬಗ್ಗೆ ಶಾಲಾ ಮುಖ್ಯ ಶಿಕ್ಷಕರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು. ಶಿಕ್ಷಕ ನಾಗಭೂಷಣ್ ವರ್ತನೆಯನ್ನು ತಿದ್ದಿಕೊಳ್ಳುವುದಾಗಿ ತಿಳಿಸಿ ತಪ್ಪೊಪ್ಪಿಗೆ ಪತ್ರ ನೀಡಿದ್ದಾರೆ.
ಶಿಕ್ಷಕರ ಈ ದುರ್ವರ್ತನೆ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಶಿಕ್ಷಕನ ವಿರುದ್ಧ ಶಿಸ್ತುಕ್ರಮ ಜರುಗಿಸಲು ನಿರ್ಣಯಿಸಿ, ಆರೋಪಗಳ ಬಗ್ಗೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


