ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರ ಹಾಗೂ ದಬ್ಬೇಗಟ್ಟ ಹೋಬಳಿ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಸುಳ್ಳು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಬಹುಮತಗಳನ್ನು ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಬೆಮೆಲ್ ಕಾಂತರಾಜು ಅಭಿಪ್ರಾಯಪಟ್ಟರು.
ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಮಾವಿನಹಳ್ಳಿಯಲ್ಲಿ ಮಾತನಾಡಿದ ಬೆಮೆಲ್ ಕಾಂತರಾಜು, ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆ ಪ್ರತಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆಯನ್ನು ಮಾಡಿದ್ದೇವೆ, ಸಾರ್ವಜನಿಕರಿಗೆ ಇವುಗಳ ಮನವರಿಕೆ ಮಾಡಿ ಗ್ಯಾರಂಟಿ ಕಾರ್ಡುಗಳನ್ನು ಕೊಡಲಾಗುವುದು, ಇದೇ ಕಾರ್ಯಕ್ರಮವನ್ನು ತುಮಕೂರಿನಲ್ಲಿ ನಮ್ಮ ಪಕ್ಷದ ಉಸ್ತುವಾರಿಗಳಾದ ಸುರ್ಜೆವಾಲ ರವರು ಉದ್ಘಾಟಿಸಿದ್ದು. ಅವುಗಳ ಬಗ್ಗೆ ಮನವರಿಕೆಯನ್ನು ಜನತೆಗೆ ಮಾಡಿಕೊಡಲು ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಮಾವಿನಹಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದೇವೆ ಎಂದರು.
ಇಲ್ಲಿ ಸೇರಿರುವ ಜನಗಳನ್ನು ನೋಡಿ ನಮ್ಮ ಕಾಂಗ್ರೆಸ್ ಪಕ್ಷದ ಮೇಲೆ ನೀವು ಇಟ್ಟಿರುವ ಅಭಿಮಾನವನ್ನು ಬೆಂಬಲವನ್ನು ತೋರುತ್ತದೆ. ನಮ್ಮ ಪಕ್ಷಕ್ಕೆ ಜೆ ಡಿ ಎಸ್ ಮತ್ತು ಬಿ ಜೆ ಪಿ ಪಕ್ಷವನ್ನು ತೊರೆದು ನೂರಾರು ಜನ ಸೇರುತ್ತಿರುವುದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ನೀವು ತೋರುತ್ತಿರುವ ಪ್ರೀತಿ ವಿಶ್ವಾಸವೇ ಸಾಕ್ಷಿ ಎಂದರು.
ತುರುವೇಕೆರೆ ವಿಧಾನಸಭಾ ಕ್ಷೇತ್ರ ಹಾಗೂ ದಬ್ಬೇಗಟ್ಟ ಹೋಬಳಿ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಸುಳ್ಳಾಗಿದೆ, ಈ ಬಾರಿ ಕಾಂಗ್ರೆಸ್ ಹೆಚ್ಚು ಬಹುಮತ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜೆ ಡಿ ಎಸ್ ಮತ್ತು ಬಿ ಜೆ ಪಿ ಪಕ್ಷಗಳನ್ನು ತೊರೆದು ಸಾಗರ್, ರಾಜು, ಮಂಜುನಾಥ್,ರಾಕೇಶ್,ಮನು, ಶೇಖರ್,ಯಶವಂತ್, ಸಂಜಯ್, ತಿಮ್ಮರಾಯಪ್ಪ, ಪ್ರೇಮ,ಮತ್ತಿತರ ನೂರಾರು ಜನ ಬೆಮೆಲ್ ಕಾಂತರಾಜುರವರ ಸಮ್ಮುಖದಲ್ಲಿ ಇವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ನಾಗೇಶ್, ಗುಡ್ಡೇನಹಳ್ಳಿ ನಂಜುಂಡಪ್ಪ, ಗೋಣಿ ತುಮಕೂರು ಕಾಂತರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೊಡಗಿಯಲ್ಲಿ ಹನುಮಂತಯ್ಯ, ಟಿ ಹೆಚ್ ಗುರುದತ್, ನೆಮ್ಮದಿ ಗ್ರಾಮದ ಸಿ ಎಸ್ ಮೂರ್ತಿ ಬಾಣಸಂದ್ರ ಲಕ್ಷ್ಮಿದೇವಮ್ಮ, ಎಂ ಕೆ ಕೆಂಪರಾಜು, ರಾಮಚಂದ್ರಯ್ಯ,ಹುಲಿಕಲ್, ಜಗದೀಶ್ ಮುಂತಾದ ಮುಖಂಡರು ಹಾಗೂ ಕಾರ್ಯಕರ್ತರುಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA