ಬೆಳಗಾವಿ : ಇದೇ ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ(ಫೆ.23) ಪರಿಶೀಲಿಸಿ ಶೋಭಾ ಕರಂದ್ಲಾಜೆ ಮಾತನಾಡಿದರು.
ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


