ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ.1 ಮಾಡುತ್ತೇವೆ. ಮುಂದಿನ 5 ವರ್ಷ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಅಮಿತ್ ಶಾ, ಸಂಡೂರಿನ ಕುಮಾರಸ್ವಾಮಿ ದೇವರಿಗೆ ನನ್ನ ನಮಸ್ಕಾರಗಳು . ಕಾಂಗ್ರೆಸ್ ಜೆಡಿಎಸ್ ಎರಡೂ ಪರಿವಾರವಾದಿ ಪಕ್ಷಗಳು. ಪರಿವಾರವಾದಿ ಪಕ್ಷಗಳಿಂದ ಬಡವರ ಕಲ್ಯಾಣವಾಗುವುದಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಕರ್ನಾಟಕ ಕಾಂಗ್ರೆಸ್ ನ ಹೈಕಮಾಂಡ್ ಗೆ ಎಟಿಎಂ ಆಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕರ್ನಾಟಕ ದೆಹಲಿಯ ಎಟಿಎಂ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಪಿಎಫ್ ಐ ಸಂಘಟನೆ ನಿಷೇಧ ಮಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಪಿಎಫ್ ಐ ಮೇಲಿನ ಕೇಸ್ ಗಳನ್ನ ಹಿಂಪಡೆದರು. ಹಲವು ಬಾರಿ ಪಾಕ್ ನಿಂದ ದಾಳಿಯಾದರೂ ಯುಪಿಎ ಮೌನ ವಹಿಸಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಳೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ . ವೈರಿ ರಾಷ್ಟ್ರ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಈ ಬಾರಿ ಪೂರ್ಣ ಬಹುಮತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ.
ಗ್ಯಾಸ್ ಸಂಪರ್ಕ, ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದ್ದೇವೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದೇವೆ ಎಂದರು.ರಾಜ್ಯದಲ್ಲಿ ಡಿಕೆ ಶಿವಕುಮಾರ್ ಸಿದ್ಧರಾಮಯ್ಯ ಪರಸ್ಪರ ಹೊಡೆದಾಡುತ್ತಿದ್ದಾರೆ. ಇವರಿಬ್ಬರ ಹೊಡೆದಾಟದಿಂದ ರಾಜ್ಯ ಅಭಿವೃದ್ದಿಯಾಗಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


