nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಹಗಾರ್ತಿ ವೈದೇಹಿ ಅವರಿಗೆ 2022ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿ
    ರಾಜ್ಯ ಸುದ್ದಿ February 25, 2023

    ಬರಹಗಾರ್ತಿ ವೈದೇಹಿ ಅವರಿಗೆ 2022ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿ

    By adminFebruary 25, 2023No Comments2 Mins Read
    videhi

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಾಗುತ್ತಿರುವ 2022ನೆಯ ಸಾಲಿನ ಪ್ರತಿಷ್ಟಿತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼ ಹಾಗೂ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಬರಹಗಾರರಾದ ಉಡುಪಿಯ ಶ್ರೀಮತಿ ವೈದೇಹಿಯವರನ್ನು ನೃಪತುಂಗ ಪ್ರಶಸ್ತಿಗೆ ಏಕಧ್ವನಿಯಲ್ಲಿ ಹಾಗೂ ಸರ್ವಾನುಮತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿಯು 7(ಏಳು) ಲಕ್ಷ ರೂ. ನಗದು ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಕನ್ನಡ ನಾಡಿನ ಪ್ರಶಸ್ತಿಯೆಂದು ಪ್ರಖ್ಯಾತವಾಗಿದೆ. ಈ ಬಾರಿ ಹಿರಿಯ ಬರಹಗಾರ್ತಿ ವೈದೇಹಿ ಅವರನ್ನು ಈ ಮೌಲಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.


    Provided by
    Provided by

    ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದು, ಸಣ್ಣಕತೆ, ಕಾವ್ಯ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಹೀಗೆ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಹುಲುಸಾದ ಕೃಷಿ ಮಾಡಿದ್ದಾರೆ. ಇವರ ಜೀವಮಾನದ ಸಾಧನೆಯನ್ನು ಪರಿಗಣಿಸಿ ಈ ಮೌಲಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ನೃಪತುಂಗ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಭಾಗದ ಸಾಹಿತಿಗಳ ಸಾಧನೆಯನ್ನು ಪರಿಗಣನೆಗೆ ತೆಗೆದುಕೊಂಡು ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯನ್ನು ಯಾವುದೇ ಒಂದು ಕೃತಿಗೆ ನೀಡದೆ ಬರಹಗಾರರು ಕನ್ನಡ ಸಾಹಿತ್ಯಕ್ಕೆ ಕೊಟ್ಟಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸುವ ಮೂಲಕ ನೀಡಲಾಗುತ್ತದೆ ಎಂದು ನಾಡೋಜ. ಡಾ.ಮಹೇಶ ಜೋಶಿ ತಿಳಿಸಿದರು.

    ನೃಪತುಂಗ ಪ್ರಶಸ್ತಿಯ ಇತಿಹಾಸದಲ್ಲಿ ಈ ಬಾರಿ ಆಯ್ಕೆಗೊಂಡ ವೈದೇಹಿ ಅವರು ಎರಡನೆಯ ಮಹಿಳಾ ಸಾಹಿತಿಯಾಗಿದ್ದಾರೆ. 2012 ರಲ್ಲಿ ಹಿರಿಯ ಬರಹಗಾರ್ತಿ ಸಾರಾ ಅಬುಬಕರ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಹಿತಿಯ ಸಮಗ್ರ ಸೇವೆಯನ್ನು ಪರಿಗಣಿಸಿ ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈ ಪ್ರಶಸ್ತಿಯು ಕರ್ನಾಟಕದಲ್ಲಿಯೇ ಅತೀ ಹೆಚ್ಚು ನಗದು ಮೊತ್ತವನ್ನು ಒಳಗೊಂಡಿರುತ್ತದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ನೃಪತುಂಗ ಹಾಗೂ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗಾಗಿ ಆಯ್ಕೆಯನ್ನು ಮಾಡಲಾಗಿದೆ. ೨೦೨೨ನೆಯ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಐವರನ್ನು ಆಯ್ಕೆಮಾಡಲಾಗಿದೆ.

    ಅವರೆಂದರೆ ಗದಗ ಜಿಲ್ಲೆಯ ಗಜೇಂದ್ರಗಡದ ಶ್ರೀ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ವಿದ್ಯಾರಶ್ಮಿ ಪೆಲ್ಲತಡ್ಕ ಹಾಗೂ ಹಾಸನದ ಬೇಲೂರು ರಘುನಂದನ ಅವರನ್ನು ಆಯ್ಕೆಮಾಡಲಾಗಿದೆ.

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯು 25001/- (ಇಪ್ಪತ್ತೈದು ಸಾವಿರದ ಒಂದು) ರೂ. ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲ ಒಳಗೊಂಡಿರುತ್ತದೆ . ಈ ಮಯೂರ ವರ್ಮ ಪ್ರಶಸ್ತಿಯು 45 ವರ್ಷದೊಳಿಗ 5 ಜನ ಪ್ರತಿಭಾವಂತ ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ. ಪ್ರತಿವರ್ಷ ಪುರಸ್ಕೃತರ ಆಯ್ಕೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಪರಿಷತ್ತಿನ ಅಧ್ಯಕ್ಷರ ನೇತ್ರತ್ವದಲ್ಲಿ 7 (ಏಳು) ಮಂದಿಯ ಆಯ್ಕೆ ಸಮಿತಿಯನ್ನು ರಚಿಸಿ ಕೂಲಂಕಶವಾಗಿ ಚರ್ಚಿಸಿ ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

    ನಿಕಟಪೂರ್ವ ನೃಪತುಂಗ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್, ಹಿರಿಯ ಸಾಹಿತಿ ಡಾ. ಎಸ್.ಆರ್.ಲೀಲಾ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಶ್ರೀ ಸತೀಶ್, ಕ.ರಾ,ರ.ಸಾ.ಸಂಸ್ಥೆಯ ಕನ್ನಡ ಕ್ರಿಯಾ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಶ್ರೀ ವ.ಚ.ಚನ್ನೇಗೌಡ ಆಯ್ಕೆ ಸಮಿತಿ ಸಭೆಯಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ…

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.