ಹಾವೇರಿ: ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ಹನುಮಂತಗೌಡ ಪಾಟೀಲ (54), ಪತ್ನಿ ಲಲಿತಾ ಪಾಟೀಲ (50) ಮತ್ತು ಮಗಳು ನೇತ್ರಾ (22) ಮೃತ ದುರ್ಧೈವಿಗಳಾಗಿದ್ದು ಮಗಳ ವಿದ್ಯಾಭ್ಯಾಸ ಮತ್ತು ಮದುವೆಗಾಗಿ ಸಾಲ ಮಾಡಿ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಹನುಮಂತಗೌಡ ತಮ್ಮ ಪುತ್ರಿ ನೇತ್ರಾ ಅವರನ್ನು 7 ತಿಂಗಳ ಹಿಂದೆ ದಾವಣಗೆರೆಯ ಉಮಾ ಶಂಕರ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. 125 ಲಕ್ಷ ಸಾಲವನ್ನು ತೀರಿಸಲು ಸಾಧ್ಯವಾಗದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


