ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿಶಾಂತ್ ಎಂಬವರು ಕಳೆದ 8 ತಿಂಗಳಲ್ಲಿ ನೂರಾರು ದೇಗುಲ, ಭವನ ನಿರ್ಮಾಣ ಮಾಡಿ ಭಾವನಾತ್ಮಕ ಮತಬೇಟೆ ನಡೆಸಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿರುವ ನಿಶಾಂತ್ ಸರಿಸುಮಾರು 149 ದೇಗುಲ, 25 ಮಠಗಳನ್ನು ಜೀರ್ಣೋದ್ಧಾರ ಮಾಡಿದ್ದು ಕಡಿಮೆ ಅವಧಿಯಲ್ಲೇ ಜನರ ಗಮನ ಸೆಳೆದು ಅಚ್ಚರಿ ಮೂಡಿಸಿದ್ದಾರೆ. ಇತರ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ.
ಬೇಡಗಂಪಣ ಹಾಗೂ ಸೋಲಿಗ ಮತವು ಹನೂರು ಕ್ಷೇತ್ರದಲ್ಲಿ ನಿರ್ಣಾಯಕ ಆಗಿರುವುದರಿಂದ ನಿಶಾಂತ್ ಅವರ ಈ ಧಾರ್ಮಿಕ ಕಾರ್ಯಗಳು ಜನರ ಮನ ಗೆಲ್ಲುತ್ತಿದೆ. ಸೋಲಿಗ ಮಹಿಳೆಯೊಬ್ಬರು ತಮ್ಮ ಮಗುವಿಗೆ ನಿಶಾಂತ್ ಎಂದು ನಾಮಕರಣ ಮಾಡಿರುವುದು 8 ತಿಂಗಳಲ್ಲಿ ನಿಶಾಂತ್ ಮಾಡಿರುವ ಮೋಡಿಗೆ ಸಾಕ್ಷಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


