ಶಿವಮೊಗ್ಗ: 7ನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಇಂದು ಶಿವಮೊಗ್ಗದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿ ಫೆಬ್ರವರಿ 21 ರಂದು ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನದಂತೆ ಈ ಬಾರಿ ಕರ್ನಾಟಕದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸೇರಿದಂತೆ ಹದಿನಾರು ಲಕ್ಷ ಮಂದಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಚುನಾವಣಾ ನೀತಿ ಸಂಹಿತೆ ಇನ್ನೇನು ಜಾರಿಯಾಗಲಿದೆ.
ಇದಲ್ಲದೇ ಇಡೀ ರಾಜ್ಯದಲ್ಲಿ ಕಡಿಮೆ ಸಂಬಳ ವನ್ನು ತೆಗೆದುಕೊಳ್ಳುವವರು, ನಾವು ಹೀಗಾಗಿ ನಾವು ನಮ್ಮ ಹಕ್ಕನ್ನು ನಾವು ಕೇಳುತ್ತಿದ್ದೆವೆ ಅಂತ ತಿಳಿಸಿದರು. ಈ ವೇಳೆಯಲ್ಲಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು ಅಂತ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


