ಫೆಬ್ರುವರಿ 27ಕ್ಕೆ ಬೆಳಗಾವಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಕಮಲ ಪಡೆ ಅದ್ದೂರಿಯಿಂದ ತಯಾರಿ ನಡೆಸಿದೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಹಗಲು ರಾತ್ರಿ ಎನ್ನದೆ ಬೆಳಗಾವಿ ನಗರದ ಗಲ್ಲಿಗಳಲ್ಲಿ ರಸ್ತೆ ಉದ್ದದ ದೀಪ ಕಂಬಗಳಿಗೆ ಭಾರತೀಯ ಜನತಾ ಪಕ್ಷದ ಧ್ವಜ ಪತಾಕೆಗಳು ಹಾಗೂ ಸ್ವಾಗತ ಕೋರುವ ಪ್ಲೆಕ್ಸ್ ಗಳನ್ನು ಅಲ್ಲಲ್ಲಿ ಅಳವಡಿಸಲಾಗುತ್ತಿದೆ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಈ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಬರುತ್ತಿರುವುದು ಅತಿಯ ಸಂತೋಷ ಹಾಗೂ ಆನಂದ ಸಂಭ್ರಮ ವನ್ನು ಉಂಟು ಮಾಡಿದೆ.
ಅಲ್ಲದೆ ದಕ್ಷಿಣ ಮತ್ತು ಉತ್ತರ ಶಾಸಕರಗಳಾದ ಅಭಯ್ ಪಾಟೀಲ್ ಹಾಗೂ ಅನಿಲ್ ಬೇನಕೆ ಇವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಕಡೆ ಬೂಡಾ ಅಧ್ಯಕ್ಷರಾದ ಸಂಜಯ್ ಬೆಳಗಾವ್ಕರ್ ತಮ್ಮ ಕಾರ್ಯಕರ್ತರೊಂದಿಗೆ ಬೆಳಗಾವಿ ನಗರಗಳ ರಸ್ತೆ ಉದ್ದಕ್ಕೂ ಅಲಂಕಾರ ಕಾರ್ಯದಲ್ಲಿ ತೊಡಗಿದ್ದಾರೆ. ಒಟ್ಟಾರೆ ಬೆಳಗಾವಿ ಕೇಸರಿಮಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


