ಶಿವಮೊಗ್ಗಾ: ಮಲೆನಾಡ ಹೆಬ್ಬಾಲಿನಲ್ಲಿ ನಿರ್ಮಾಣವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಅಭಿವೃದ್ಧಿಪರ ಆಡಳಿತ ಮಾಡಿದ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ ಸನ್ಮಾನಿಸಿದ ಪ್ರಧಾನಿ ಮೋದಿ ಬಿ.ಎಸ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್‌ಪೋರ್ಟ್ ಲೋಕಾರ್ಪಣೆ ಗೊಳಿಸಿದರು.
ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾದ ಈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


