ಶಿವಮೊಗ್ಗ: ಶಿವಮೊಗ್ಗದ ಸೋಗಾನೆಯಲ್ಲಿರುವುದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆಯಾಗಿದೆ ಎಂದು ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ಭಾವುಕವಾಗಿ ಮಾತನಾಡಿದರು.
ವಿಶ್ವವೇ ಮೆಚ್ಚುವಂತೆ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ರಾಷ್ಟ್ರಕವಿ ಕುವೆಂಪು ಅವರು ತಿಳಿಸಿದ ವಿಶ್ವ ಮಾನವ ತತ್ವಕ್ಕೆ ಉದಾಹರಣೆಯಾಗಿದೆ. ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು ಎಂಬ ಕವಿವಾಣಿಯಂತೆ ಈ ನಾಡಿನ ಅಭಿವೃದ್ಧಿ ಕನಸಿನೊಂದಿಗೆ 70ರ ದಶಕದಲ್ಲಿ ಸಾರ್ವಜನಿಕ ಬದುಕು ಪ್ರವೇಶಿಸಿದ ನನ್ನ ಬದುಕಿನಲ್ಲಿ ಈ ದಿನ ಬಹಳ ವೈಶಿಷ್ಟ್ಯಪೂರ್ಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೇರವಾಗಿ ವಿಮಾನದಲ್ಲಿ ಬಂದಿಳಿದು ವಿಮಾನ ನಿಲ್ದಾಣವನ್ನು ಉದ್ಘಾಟಿಸಿರುವುದು ಜಿಲ್ಲೆಯ ಜನರ ಪಾಲಿಗೆ ಸಾರ್ಥಕದ ದಿನವಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


