ನವದೆಹಲಿ: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಇಂದು ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು 50ರೂ ಹೆಚ್ಚಳ ಮಾಡಲಾಗಿದೆ. ಅಲ್ಲದೇ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 350.50 ರೂ ಹೆಚ್ಚಳ ಮಾಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಈ ಮೂಲಕ ಸಿಲಿಂಡರ್ ಬೆಲೆ ಏರಿಕೆಯಿಂದ ಜನರಿಗೆ ಬಿಗ್ ಶಾಕ್ ನೀಡಲಾಗಿದೆ.14.2 ಕೆಜಿ ದೇಶೀಯ ದ್ರವೀಕೃತ ಪೆಟ್ರೋಲಿಯಂ ಅನಿಲ (Domestic liquefied petroleum gas – LPG) ಸಿಲಿಂಡರ್ ಬೆಲೆಯನ್ನು ( cylinder Price ) ಇಂದಿನಿಂದ ಜಾರಿಗೆ ಬರುವಂತೆ 50 ರೂ.ಗೆ ಹೆಚ್ಚಿಳಮಾಡಲಾಗಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ, ದೇಶೀಯ ಸಿಲಿಂಡರ್ domestic cylinder ) ಬೆಲೆ ದೆಹಲಿಯಲ್ಲಿ ಇಂದಿನಿಂದ ಪ್ರತಿ ಸಿಲಿಂಡರ್ ಗೆ 1103 ರೂ.ಗೆ ಏರಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


