7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸರ್ಕಾರಿ ನೌರಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಇಂದು ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.
ಸರ್ಕಾರಿ ನೌಕರರ ಪ್ರತಿಭಟನೆಗೆ ಪ್ರೌಢ ಶಾಲಾ ಶಿಕ್ಷಕರ ಸಂಘವೂ ಬೆಂಬಲಿಸಿದ್ದು 80 ಸಾವಿರ ಪ್ರೌಢ ಶಾಲಾ ಶಿಕ್ಷಕರು ಗೈರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಯಲ್ಲಿ ಇಂದು ನಡೆಯಬೇಕಿದ್ದ ಹಿಂದಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮಾರ್ಚ್ 6 ರಂದು ಹಿಂದಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


